ಮೀಯಪದವು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ

Bdk_Health resolution
Published on

ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯ ಆಶ್ರಯದಲ್ಲಿ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ಜರಗಿತು. ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಮುಖ್ಯಶಿಕ್ಷಕ ರಾಜಾರಾಮ ರಾವ್ ವಾದಕ ದ್ರವ್ಯ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.

ತಲಚ್ಚೇರಿ ಬ್ರೆನ್ನನ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪಿ.ಎನ್. ಮೂಡಿತ್ತಾಯ ಉದ್ಘಾಟಿಸಿದರು. ಶಾಲಾ ಸಂಚಾಲಕ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅರಿಬೈಲು ಗೋಪಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಸುಂಕದಕಟ್ಟೆ ವಲಯ ಮೇಲ್ವಿಚಾರಕ ಕೃಷ್ಣಪ್ಪ, ಮುಖ್ಯಶಿಕ್ಷಕಿ ಮೃದುಲಾ ಕೆ.ಎಂ. ಶುಭ ಹಾರೈಸಿದರು. ಶಿಕ್ಷಕ ರಾಜಾರಾಮ ಸ್ವಾಗತಿಸಿದರು. ಲಕ್ಷ್ಮೀಶ ವಂದಿಸಿದರು. ಡಾ.ವ್ನಿೇಶ ಶರ್ಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net