ಬಿಸಿನೀರು ಕುಡಿಯುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದೇ; ತಜ್ಞರು ಹೇಳೋದೇನು.. ಇಲ್ಲಿದೆ ಮಾಹಿತಿ |Health Tips

Untitled design - 2024-12-18T191251.809
Published on

ಪ್ರತಿ ವ್ಯಕ್ತಿಗೆ ಸಾಕಷ್ಟು ನೀರು ಕುಡಿಯುವುದು ಬಹಳ ಮುಖ್ಯ. ಇದು ದೇಹವನ್ನು ಹೈಡ್ರೀಕರಿಸುತ್ತದೆ ಮತ್ತು ಅನೇಕ ಸಮಸ್ಯೆಗಳಿಂದ ರಕ್ಷಿಸುತ್ತದೆ. ಆದರೆ ಹೆಚ್ಚಿನ ಜನರು ತಣ್ಣೀರು ಕುಡಿಯಲು ಬಯಸುತ್ತಾರೆ. ಐಸ್ ವಾಟರ್​ ಅಥವಾ ರೆಫ್ರಿಜರೇಟರ್​​ನಲ್ಲಿ ಇರಿಸಲಾದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.(Health Tips)

ಉಗುರುಬೆಚ್ಚಗಿನ ಅಥವಾ ಸರಳ ನೀರು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ಉಗುರುಬೆಚ್ಚಗಿನ ಅಥವಾ ಬಿಸಿನೀರನ್ನು ದಿನವಿಡೀ ಸೇವಿಸಿದರೆ ಅದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ಬಿಸಿನೀರಿನ ಸೇವನೆಯು ಕಠಿಣ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರ ಹೇಳುತ್ತಾರೆ. ಆದರೆ ಬಿಸಿನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಬಹುದು ಎಂದು ನೀವು ಹಲವು ಬಾರಿ ಕೇಳಿರಬಹುದು. ಇದರಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದಾಗಿ ದೇಹದಲ್ಲಿ ಹಲವಾರು ರೀತಿಯ ಬದಲಾವಣೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗಳು, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ತೊಂದರೆಗಳು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು ದಿನವಿಡೀ 8 ರಿಂದ 10 ಗ್ಲಾಸ್ ನೀರನ್ನು ಕುಡಿಯುವುದು ನಿಮಗೆ ಪ್ರಯೋಜನಕಾರಿಯಾಗಿದೆ.

ಬಿಸಿನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಬಿಸಿನೀರು ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಪ್ರತಿದಿನ ಬಿಸಿನೀರು ಕುಡಿಯುವುದರಿಂದ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯಗೊಳಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ. ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಬಿಸಿನೀರಿನ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಬಿಸಿನೀರು ಕುಡಿಯುವುದು ದೇಹವನ್ನು ಹೈಡ್ರೇಟ್ ಆಗಿ ಇಡಲು ಸಹ ಪ್ರಯೋಜನಕಾರಿಯಾಗಿದೆ. ಇದಲ್ಲದೆ ತೂಕ ಇಳಿಸಿಕೊಳ್ಳಲು ಬಯಸುವ ಜನರು ಬಿಸಿನೀರನ್ನು ಕುಡಿಯಲು ಸಲಹೆ ನೀಡುತ್ತಾರೆ.

ಬಿಸಿನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆಯೇ?

ಬಿಸಿನೀರು ಕುಡಿಯುವುದು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಮುಖ್ಯವಾಗಿದೆ ಆದರೆ ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೇವಲ ಬಿಸಿನೀರನ್ನು ಕುಡಿಯುವುದರಿಂದ ಕಡಿಮೆ ಮಾಡಬಹುದು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಏಕೆಂದರೆ ನಾವು ನಿಯಮಿತವಾಗಿ ಸಾಕಷ್ಟು ನೀರು ಕುಡಿದಾಗ, ನಮ್ಮ ದೇಹದಿಂದ ವಿಷಕಾರಿ ವಸ್ತುಗಳು ಬಿಡುಗಡೆಯಾಗುತ್ತವೆ. ಇದರಿಂದಾಗಿ ರಕ್ತದಲ್ಲಿರುವ ಹೆಚ್ಚುವರಿ ಸಕ್ಕರೆ ಮೂತ್ರದ ಮೂಲಕ ಹೊರಹಾಕಲ್ಪಡುತ್ತದೆ. ಬಿಸಿ ಮಾತ್ರವಲ್ಲ ಸರಳ ನೀರು ಕೂಡ ಇದರಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಕನಿಷ್ಠ ಮೂರು ಲೀಟರ್ ನೀರನ್ನು ಕುಡಿಯಲು ಪ್ರಯತ್ನಿಸಿ.

ನೀರು ಕುಡಿಯಲು ಸರಿಯಾದ ಮಾರ್ಗ

ನೀವು ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯದಲ್ಲಿ ನೀರನ್ನು ಕುಡಿಯುವುದರಿಂದ ಗರಿಷ್ಠ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಹೆಚ್ಚಿನ ಪ್ರಯೋಜನಗಳಿಗಾಗಿ ನೀವು ಬಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಹೀಗೆ ಮಾಡುವುದರಿಂದ ದೇಹದಲ್ಲಿರುವ ಟಾಕ್ಸಿನ್‌ಗಳು ಸುಲಭವಾಗಿ ಬಿಡುಗಡೆಯಾಗುತ್ತವೆ ಮತ್ತು ಇದರ ನಂತರ ಊಟಕ್ಕೆ 30 ನಿಮಿಷಗಳ ಮೊದಲು ನೀರನ್ನು ಕುಡಿಯಿರಿ. ಸ್ನಾನಕ್ಕೆ 30 ನಿಮಿಷಗಳ ಮೊದಲು ನೀರು ಕುಡಿಯಿರಿ. ನೀವು ಮನೆಯಿಂದ ಹೊರಗೆ ಹೋದಾಗ ನೀರನ್ನು ಕುಡಿಯದೆ ಬಿಡಬೇಡಿ. ನೀವು ನಿಂತಿರುವಾಗ ನೀರನ್ನು ಕುಡಿಯಬಾರದು ಎಂಬುದನ್ನು ಸಹ ನೆನಪಿನಲ್ಲಿಡಿ.

ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ಕಡಿಮೆ ಮಾಡುವುದು

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು, ಒಬ್ಬರ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ತರುವ ಅವಶ್ಯಕತೆಯಿದೆ. ಇದರಲ್ಲಿ ಸಮತೋಲಿತ ಮತ್ತು ಪೋಷಕಾಂಶ-ಭರಿತ ಆಹಾರದೊಂದಿಗೆ, ಪ್ರತಿದಿನ ನಿಯಮಿತ ವ್ಯಾಯಾಮವನ್ನು ಮಾಡುವುದು ಸಹ ಅಗತ್ಯವಾಗಿದೆ. ಮಧುಮೇಹದಿಂದ ಬಳಲುತ್ತಿರುವ ಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಇದು ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net