More

    ಒಂದು ಹಿಡಿ ಹುರಿಗಡಲೆಯನ್ನು ತಿಂದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ…

    ಮಾನವನ ಆಹಾರ ಚಕ್ರದಲ್ಲಿ ಹುರಿಗಡಲೆ ಕೂಡ ಪ್ರಮುಖ ಸ್ಥಾನ ಪಡೆದಿದೆ. ಈ ಹುರಿಗಡಲೆಗಳನ್ನು ಹೆಚ್ಚಾಗಿ ಚಟ್ನಿ ಮತ್ತ ಫ್ರೈಗಳಲ್ಲಿ ಬಳಸುತ್ತಾರೆ. ಅಲ್ಲದೆ, ಕಡಲೆಪುರಿ ಜತೆ ಹುರಿಕಡಲೆ ಕಾಂಬಿನೇಷನ್​ ಸಖತ್ತಾಗಿರುತ್ತದೆ. ಈ ಹುರಿಗಡಲೆ ರುಚಿಗೆ ಮಾತ್ರವಲ್ಲ, ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾದರೆ ಆ ಪ್ರಯೋಜನಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

    ಹುರಿಗಡಲೆಗಳಲ್ಲಿ ಪ್ರೋಟೀನ್ ಅಧಿಕವಾಗಿರುತ್ತದೆ. ಪ್ರತಿ 100 ಗ್ರಾಂ ಹುರಿಗಡಲೆಯಲ್ಲಿ 18.64 ಗ್ರಾಂಗಳಷ್ಟು ಪ್ರೋಟೀನ್​ ಹೊಂದಿರುತ್ತದೆ. ಮಾಂಸ ತಿನ್ನದೇ ಇರುವವರು ಅಥವಾ ಸಸ್ಯಾಹಾರಿ ಆಹಾರವನ್ನು ಅನುಸರಿಸುವವರು ಹುರಿಗಡಲೆ ಮೂಲಕ ದೇಹಕ್ಕೆ ಸಾಕಷ್ಟು ಪ್ರೋಟೀನ್ ಪಡೆಯಬಹುದು.

    ಹುರಿಗಡಲೆಯಲ್ಲಿ ಫೈಬರ್, ಜೀವಸತ್ವಗಳು ಮತ್ತು ಮಿನರಲ್ಸ್​ ಹೆಚ್ಚಿನ ಪ್ರಮಾಣದಲ್ಲಿರುತ್ತದೆ ಮತ್ತು ಕ್ಯಾಲ್ಸಿಯಂ ಸಹ ಹೊಂದಿರುತ್ತದೆ. ನಾರಿನಂಶ ಅಧಿಕವಾಗಿದ್ದು, ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಹೊಟ್ಟೆಯ ಆರೋಗ್ಯವನ್ನು ಸುಧಾರಿಸಲು ಹುರಿಗಡಲೆ ತುಂಬಾ ಸಹಾಯ ಮಾಡುತ್ತದೆ.

    ಹುರಿಗಡಲೆಯನ್ನು ಸೇವಿಸುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರಿಂದ ಹೆಚ್ಚು ಆಹಾರ ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ತೂಕ ಇಳಿಸಿಕೊಳ್ಳಲು ನೆರವಾಗುತ್ತದೆ. ಇದರಲ್ಲಿ ಫೋಲೇಟ್, ಕಬ್ಬಿಣ, ರಂಜಕ, ಮೆಗ್ನೀಷಿಯಂ, ಪೊಟ್ಯಾಶಿಯಂನಂತಹ ಪೋಷಕಾಂಶಗಳಿವೆ. ಇವುಗಳನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಆಸ್ಟಿಯೊಪೊರೋಸಿಸ್‌ನಂತಹ ಮೂಳೆ ಸಂಬಂಧಿತ ಸಮಸ್ಯೆಗಳು ಬಾದಿಸುವುದಿಲ್ಲ.

    ಹುರಿಗಡಲೆಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿ. ಅಲ್ಲದೆ, ಇದರ ಸೇವನೆಯಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವು ಸಹ ನಿಯಂತ್ರಣಕ್ಕೆ ಬರುತ್ತದೆ. ಹೃದಯ ಮತ್ತು ಮಿದುಳಿನ ಕಾರ್ಯಗಳು ಉತ್ತಮವಾಗಿರುತ್ತವೆ ಹಾಗೂ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.

    ಹುರಿಗಡಲೆಯು ಸ್ನಾಯುಗಳನ್ನು ರಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ. ಹುರಿಗಡಲೆಯು ಅತಿಯಾಗಿ ಎಣ್ಣೆಯಲ್ಲಿ ಕರಿದ ತಿಂಡಿಗಳಿಗೆ ಆರೋಗ್ಯಕರ ಪರ್ಯಾಯವಾಗಿದೆ. ಏಕೆಂದರೆ, ಹುರಿಗಡಲೆಯಲ್ಲಿ ಕಡಿಮೆ ಕ್ಯಾಲೋರಿಗಳು ಮತ್ತು ಕಡಿಮೆ ಕೊಬ್ಬನ್ನು ಹೊಂದಿರುತ್ತವೆ. (ಏಜೆನ್ಸೀಸ್​)

    ಚಿಕನ್​ ಲಿವರ್​ ತಿನ್ನುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ನೋಡಿ ಅಚ್ಚರಿಯ ಮಾಹಿತಿ

    ಹಲ್ಲುಜ್ಜುವಾಗ ನೀವು ಮಾಡುವ ಈ ತಪ್ಪುಗಳು ನಿಮ್ಮ ಹಲ್ಲುಗಳನ್ನು ಹಳದಿ ಬಣ್ಣಕ್ಕೆ ತಿರುಗಿಸುತ್ತದೆ ಎಚ್ಚರ!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts