ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು ಬಹಳಷ್ಟು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಂತೆ. ಆದರೆ ಹಲವರು ಕರಿಬೇವಿನ ಸೊಪ್ಪನ್ನು ತೆಗೆದು ಪಕ್ಕಕ್ಕೆ ಎಸೆಯುತ್ತಾರೆ. ಕರಿಬೇವಿನ ಎಲೆಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಕರಿಬೇವಿನ ಸೊಪ್ಪಿನಲ್ಲಿ ಹಲವಾರು ರೀತಿಯ ಅದ್ಭುತವಾದ ಆರೋಗ್ಯ ಪ್ರಯೋಜನಗಳಿವೆ ( Health Tips ) ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಕರಿಬೇವಿನ ನೀರು ಕುಡಿಯುವುದರಿಂದ ಹೆಚ್ಚು ಹೆಚ್ಚು ಲಾಭವಾಗುತ್ತದೆ ಎಂದು ಹೇಳಲಾಗುತ್ತದೆ.
ಕರಿಬೇವಿನ ಎಲೆ ನೀರು ತಯಾರಿಸುವ ವಿಧಾನ:
ಕರಿಬೇವಿನ ಎಲೆಗಳನ್ನು ಚೆನ್ನಾಗಿ ತೊಳೆದು, ನಂತರ ಒಂದು ಲೋಟ ನೀರನ್ನು ತೆಗೆದುಕೊಂಡು ಅದರಲ್ಲಿ 8 ರಿಂದ 10 ಕರಿಬೇವಿನ ಎಲೆಗಳನ್ನು ಸೇರಿಸಿ. ಅವುಗಳನ್ನು ಚೆನ್ನಾಗಿ ಕುದಿಸಿ. ಈ ನೀರನ್ನು ಫಿಲ್ಟರ್ ಮಾಡಿ ಕುಡಿಯಿರಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ನೀರನ್ನು ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದರ ಜೊತೆಗೆ ದೇಹಕ್ಕೆ ಇನ್ನೂ ಅನೇಕ ಪ್ರಯೋಜನಗಳು ದೊರೆಯುತ್ತವೆ.
ಕರಿಬೇವಿನ ಎಲೆ ನೀರಿನಿಂದ ಆರೋಗ್ಯಕ್ಕೆ ಇರುವ ಪ್ರಯೋಜನ:
ಕರಿಬೇವಿನ ಎಲೆಗಳ ಜೊತೆಗೆ ಕರಿಬೇವಿನ ನೀರು ಕೂಡ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಮ್ಮ ದೇಹವು ಸದೃಢವಾಗಿರಬೇಕಾದರೆ ನಮ್ಮ ಜೀರ್ಣಕ್ರಿಯೆಯು ಆರೋಗ್ಯಕರವಾಗಿರಬೇಕು. ಆದರೆ ಕರಿಬೇವಿನ ಎಲೆಗಳು ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಕೆಲವು ಕಿಣ್ವಗಳಲ್ಲಿ ಸಮೃದ್ಧವಾಗಿವೆ.
ಪ್ರತಿದಿನ ಬೆಳಗ್ಗೆ ಕರಿಬೇವಿನ ನೀರು ಕುಡಿದರೆ ಕರುಳಿನ ಚಲನೆ ಸುಲಭವಾಗುತ್ತದೆ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳೂ ದೂರವಾಗುತ್ತವೆ ಎಂದು ಹೇಳಲಾಗುತ್ತದೆ.
ಇಂದಿನ ದಿನಗಳಲ್ಲಿ ಒತ್ತಡ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಅನೇಕರು ಒತ್ತಡದಿಂದ ಬಳಲುತ್ತಿದ್ದಾರೆ. ಒತ್ತಡವು ಮಾನಸಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.ಆದರೆ ಕರಿಬೇವಿನ ಎಲೆಗಳು ಈ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಕರಿಬೇವಿನ ನೀರು ಕುಡಿಯುವುದರಿಂದ ಮನಸ್ಸು ಶಾಂತವಾಗುತ್ತದೆ.
ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇವುಗಳು ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕರಿಬೇವಿನ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದು ನಿಮ್ಮ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಮಧುಮೇಹ ರೋಗಿಗಳಿಗೆ ಕರಿಬೇವಿನ ಎಲೆಗಳು ತುಂಬಾ ಪ್ರಯೋಜನಕಾರಿ. ಪ್ರತಿದಿನ ಬೆಳಗ್ಗೆ ಕರಿಬೇವಿನ ನೀರು ಕುಡಿದರೆ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ. ಆಹಾರದಲ್ಲಿ ಇರುವಂತಹ ಸಕ್ಕರೆ ಪ್ರಮಾಣವನ್ನು ಬೇಗನೆ ಬಿಡುಗಡೆ ಮಾಡುವುದಿಲ್ಲ. ಇದರಿಂದ ನಿಮ್ಮ ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪುವುದಿಲ್ಲ.