ಈ ಕೆಟ್ಟ ಅಭ್ಯಾಸಗಳಿಂದ ಮಹಿಳೆಯರು ಗರ್ಭಧರಿಸಲು ಸಾಧ್ಯವಾಗುವುದಿಲ್ಲ; ತಿಳಿದುಕೊಳ್ಳಲೇಬೇಕಾದ ಮಾಹಿತಿ |Health Tips

blank

ಥೈರಾಯ್ಡ್, ಪಿಸಿಓಎಸ್ ಮತ್ತು ಇತರ ಹಾರ್ಮೋನುಗಳ ಬದಲಾವಣೆಗಳಂತಹ ಹಲವು ಕಾರಣಗಳಿಂದ ಮಹಿಳೆಯರ ಬಂಜೆತನ ಉಂಟಾಗಬಹುದು. ಇದು ಪಿರಿಯಡ್ಸ್​ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ಗರ್ಭಧರಿಸುವಲ್ಲಿ ಗಂಭೀರ ತೊಂದರೆಗಳು ಉಂಟಾಗಬಹುದು.(Health Tips)

ಇದನ್ನು ಓದಿ:  ಕೆಂಪು ಬಾಳೆಹಣ್ಣಿನ ಸೇವನೆಯಿಂದಾಗುವ ಅದ್ಭುತ ಪ್ರಯೋಜಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಸಂತಾನೋತ್ಪತ್ತಿ ಸಮಸ್ಯೆಗಳಿಂದಾಗಿ ಮಹಿಳೆಯರು ಗರ್ಭಧರಿಸಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳು ಫಾಲೋಪಿಯನ್ ಟ್ಯೂಬ್‌ಗಳಲ್ಲಿನ ಅಡಚಣೆ, ಫೈಬ್ರಾಯ್ಡ್‌ಗಳು ಅಥವಾ ಗರ್ಭಾಶಯದಲ್ಲಿನ ಪಾಲಿಪ್ಸ್‌ಗಳಂತಹ ವಿಷಯಗಳಾಗಿರಬಹುದು ಅಥವಾ ಎಂಡೊಮೆಟ್ರಿಯೊಸಿಸ್‌ನಂತಹ ಪರಿಸ್ಥಿತಿಗಳು ಬಂಜೆತನಕ್ಕೆ ಕಾರಣವಾಗಬಹುದು.

ಅಸಮರ್ಪಕ ಅಂಡೋತ್ಪತ್ತಿ ಮತ್ತು ಅನಿಯಮಿತ ಋತುಚಕ್ರದ ಕಾರಣದಿಂದಾಗಿ ಮಹಿಳೆಯರು ಬಂಜೆತನಕ್ಕೆ ಬಲಿಯಾಗುತ್ತಾರೆ. ಆದ್ದರಿಂದ ನಿಮ್ಮ ಋತುಚಕ್ರವು ಆರೋಗ್ಯಕರವಾಗಿದೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಬಹಳಷ್ಟು ಅವಲಂಬಿತವಾಗಿರುತ್ತದೆ.
ಮಹಿಳೆಯ ವಯಸ್ಸು ಹೆಚ್ಚಾದಂತೆ ಆಕೆಯ ಫರ್ಟಿಲಿಟಿ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಮಹಿಳೆಯರು ತಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಏಕೆಂದರೆ ಅದು ಕೆಟ್ಟದಾಗಿಯೇ ಇದ್ದರೆ ಅದು ಅವರ ಫಲವತ್ತತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕವು ಬಂಜೆತನದ ಅಪಾಯವನ್ನು ಹೆಚ್ಚಿಸುತ್ತದೆ. ಇಷ್ಟೇ ಅಲ್ಲ ಒಬ್ಬ ಮಹಿಳೆ ಚಿಕ್ಕ ವಯಸ್ಸಿನಲ್ಲಿಯೇ ಮಧುಮೇಹ, ಅಧಿಕ ರಕ್ತದೊತ್ತಡ ಅಥವಾ ವೈದ್ಯಕೀಯ ತುರ್ತುಸ್ಥಿತಿಯಂತಹ ಸಮಸ್ಯೆಗಳನ್ನು ಎದುರಿಸಿದರೆ ಅವಳು ಬಂಜೆತನಕ್ಕೆ ಬಲಿಯಾಗುತ್ತಾಳೆ. ಹಲವು ಬಾರಿ ಮಹಿಳೆಯರು ಹೆಚ್ಚಿನ ಒತ್ತಡ, ವ್ಯಾಯಾಮದ ಕೊರತೆ ಮತ್ತು ರಾಸಾಯನಿಕಗಳಿಂದ ಸಮೃದ್ಧವಾಗಿರುವ ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದರಿಂದ ಬಂಜೆತನಕ್ಕೆ ಬಲಿಯಾಗಬಹುದು.

ಬಂಜೆತನ ಯಾವಾಗಲೂ ಮಹಿಳೆಯಿಂದ ಉಂಟಾಗುವುದಿಲ್ಲ. ವಾಸ್ತವವಾಗಿ ಪುರುಷನ ಫರ್ಟಿಲಿಟಿಯಲ್ಲೂ ಸಮಸ್ಯೆ ಇರಬಹುದು. ಗರ್ಭಧರಿಸಲು ತೊಂದರೆ ಇದ್ದರೆ ಸ್ತ್ರೀರೋಗ ತಜ್ಞರನ್ನು ಸಂಪರ್ಕಿಸಿ. ಬಂಜೆತನಕ್ಕೆ ಚಿಕಿತ್ಸೆ ನೀಡಬಹುದು.

ಊಟ & ನಿದ್ರೆಯ ನಡುವಿನ ಅಂತರ ಎಷ್ಟಿರಬೇಕು?; ಇಲ್ಲಿದೆ ICMR ನೀಡಿರುವ ಸೂಚನೆ | Health Tips

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…