ಶಿಡ್ಲಾಪುರದಲ್ಲಿ ಮೊಕ್ಕಾಂ ಹೂಡಿದ ಆರೋಗ್ಯ ಸಿಬ್ಬಂದಿ

ಶಿಗ್ಗಾಂವಿ: ತಾಲೂಕಿನ ಶಿಡ್ಲಾಪುರ ಗ್ರಾಮದಲ್ಲಿ ಶಂಕಿತ ಡೆಂಘೆ ಜ್ವರಕ್ಕೆ ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಾಲೂಕು ಆಡಳಿತ ಮುಕ್ಕಾಂ ಹೂಡಿದ್ದು, ಗ್ರಾಮದ ಮನೆಮನೆಗೆ ತೆರಳಿ ಅನರೋಗ್ಯಕ್ಕೆ ಒಳಗಾದವರ ರಕ್ತ ತಪಾಸಣೆ ಮಾಡುತ್ತಿದ್ದಾರೆ.

ಶನಿವಾರ ಬೆಳಗ್ಗೆ ತಾಲೂಕು ಆರೋಗ್ಯ ಇಲಾಖೆ ತಂಡ ಗ್ರಾಮದ ಪ್ರತಿ ಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದಾರೆ. ಲಾರ್ವಾ ಕಂಡು ಬಂದಲ್ಲಿ ಅವುಗಳನ್ನು ದ್ರಾವಣ ಬಳಸಿ ನಾಶ ಪಡಿಸಲಾಗುತ್ತಿದೆ. ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಫೇವರ್ ಕ್ಲಿನಿಕ್ ಸ್ಥಾಪಿಸಿರುವ ಡಾ. ರಂಜಿತಾ ನೇತೃತ್ವದ ತಂಡ ಜ್ವರದಿಂದ ಬಳಲುತ್ತಿರುವವರ ರಕ್ತದ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳುಹಿಸುತ್ತಿದ್ದಾರೆ. ಇದಲ್ಲದೇ ಇನ್ನಿತರ ಕಾಯಿಲೆಗೆ ತುತ್ತಾಗಿರುವವರ ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಿ ಔಷಧೋಪಚಾರ ಮಾಡಲಾಗುತ್ತಿದೆ. ಗ್ರಾಮದಲ್ಲಿ ಇದುವರೆಗೆ ಜ್ವರದಿಂದ ಬಳಲುತ್ತಿರುವ 21 ಜನರ ರಕ್ತದ ಮಾದರಿ ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಾ. ರಂಜಿತಾ ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಗ್ರಾಮದ ಸ್ವಚ್ಛತೆಗೆ ಮುಂದಾಗಿದ್ದು, ತುಂಬಿ ಹರಿಯುತ್ತಿರುವ ಚರಂಡಿಗಳನ್ನು ಸ್ಚಚ್ಛಗೊಳಿಸುತ್ತಿದ್ದಾರೆ. ಚರಂಡಿಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ಸೊಳ್ಳೆ ನಾಶಕ್ಕೆ ಗ್ರಾಮದಲ್ಲಿ ಫಾಗಿಂಗ್ ಮಾಡಲಾಗುತ್ತಿದೆ.

ಶುಕ್ರವಾರ ಶಂಕಿತ ಡಂಘ ಜ್ವರದಿಂದ ಶಿಡ್ಲಾಪುರ ಗ್ರಾಮದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕೆಎಂಸಿಯಲ್ಲಿ ಮೃತಪಟ್ಟಿದ್ದಳು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪಿಡಿಒಗೆ ಘೕರಾವ್ ಹಾಕಿ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು.

ತಹಸೀಲ್ದಾರ್ ಸಂತೋಷ ಹಿರೇಮಠ, ಪಿಎಸ್​ಐ ನಿಂಗರಾಜ ಕರಕಣ್ಣವರ ಮತ್ತು ಟಿಎಚ್​ಒ ಡಾ.ಸತೀಶ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡಿದ್ದರು. ಚರಂಡಿಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಗ್ರಾಮದಲ್ಲಿ ಜ್ವರದ ಕ್ಲಿನಿಕ್ ಸ್ಥಾಪಿಸಿ ಜ್ವರದಿಂದ ಬಳಲುತ್ತಿರುವವರ ರಕ್ತ ಪರೀಕ್ಷೆ ನಡೆಸಿ ಅವರಿಗೆ ಸೂಕ್ತ ಔಷಧ ನೀಡುವ ಭರವಸೆ ನೀಡಿದ್ದರು.

ಪಿಡಿಒ ಸುಧೀರ ಹಡಗಲಿ, ಗ್ರಾಪಂ ಸದಸ್ಯ ಪ್ರವೀಣ ಗೂಳಣ್ಣವರ, ಮಂಜುನಾಥ ಬಡಪ್ಪನವರ, ಮುತ್ತಪ್ಪ ಕಲಕಟ್ಟಿ, ಪುಟ್ಟಪ್ಪ ಸಣ್ಣಮನಿ, ಸುಭಾಸ ಕೆಂಗಣ್ಣವರ, ಯಲಿಗಚ್ಚ, ಫಕೀರಪ್ಪ ದೊಡಮನಿ, ಕೊಣನಕೇರಿ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share This Article

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ದಿನಕ್ಕೊಂದು ಬಾಳೆಹಣ್ಣು ಎನ್ನುವ ಹಾಗೆ 30 ದಿನ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

 ಬೆಂಗಳೂರು: ಪ್ರತಿದಿನ ಬಾಳೆಹಣ್ಣು ತಿನ್ನಬೇಕು. ಇದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮಾವು ಹಣ್ಣುಗಳ ರಾಜನಾಗಿರಬಹುದು ಆದರೆ…

ತಲೆಯಲ್ಲಿ ಎರಡು ಸುಳಿ ಇದ್ರೆ ಎರಡು ಮದ್ವೆ ಆಗ್ತಾರೆ! ನಿಜಕ್ಕೂ ಇದು ಸತ್ಯಾನಾ?

ಬೆಂಗಳೂರು:  ಪ್ರತಿಯೊಬ್ಬರ ತಲೆಯ ಮೇಲೆ ಸುಳಿಗಳಿರುವುದು ಸಾಮಾನ್ಯ. ಈ ಸುರುಳಿಗಳು ಹುಟ್ಟಿನಿಂದಲೇ ತಲೆಯ ಮೇಲೆ ಇರುತ್ತವೆ.…