ನಿಮಗೆ ಗೊತ್ತಿರಬಹುದು ಇತ್ತೀಚೆಗೆ ಬಾಲಿವುಡ್ ಹಿರಿಯ ನಟ ಗೋವಿಂದ ತೀವ್ರ ಆಯಾಸದಿಂದ ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತಿಯಾದ ವ್ಯಾಯಾಮವೇ ಆಯಾಸಕ್ಕೆ ಕಾರಣವೆಂದು ವೈದ್ಯರು ಹೇಳಿದ್ದಾಗಿ ತಿಳಿಸಿದರು. ಆದ್ದರಿಂದ, ಪ್ರತಿ ವಯೋಮಾನದವರಿಗೂ ಸೂಕ್ತವಾದ ವ್ಯಾಯಾಮ ಮಿತಿ ಇರುತ್ತದೆ ಅನ್ನೋದನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ವಯಸ್ಸಿನ ಮಿತಿಗೆ ಅನುಗುಣವಾಗಿ ವ್ಯಾಯಾಮ ಮಾಡುವುದು ಬಹಳ ಮುಖ್ಯವೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.