

ವಿಜಯವಾಣಿ ಸುದ್ದಿಜಾಲ ಹೆಬ್ರಿ ನಾವು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಆರೋಗ್ಯವಂತರಾಗಿರಬಹುದು. ರಕ್ತದಾನ ಮಾಡುವುದು ಪುಣ್ಯದ ಕೆಲಸ ಎಂದು ವಿಧಾನಪರಿಷತ್ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಎಳ್ಳಾರೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಐಎಎಸ್ ಅಧಿಕಾರಿ ಸದಾಶಿವ ಪ್ರಭು ಎಳ್ಳಾರೆ, ಮಂಗಳೂರು ವಿಭಾಗ ಗ್ರಾಮವಿಕಾಸ ಟೋಳಿ ಸದಸ್ಯೆ ರಮಿತಾ ಶೈಲೇಂದ್ರ, ಕಡ್ತಲ ಗ್ರಾ.ಪಂ. ಅಧ್ಯಕ್ಷ ಸುಕೇಶ್ ಹೆಗ್ಡೆ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್, ವೈದ್ಯ ಡಾ.ಪ್ರಮೋದ್ಕುಮಾರ್ ಹೆಗ್ಡೆ, ಲಯನ್ಸ್ ಕ್ಲಬ್ ಮುನಿಯಾಲಿನ ಅಧ್ಯಕ್ಷ ಸಂದೇಶ್ ಶೆಟ್ಟಿ, ಶ್ರೀ ಜನಾರ್ದನ ಟ್ರಸ್ಟ್ ಅಧ್ಯಕ್ಷ ಪ್ರಸನ್ನ ಶೆಟ್ಟಿ ಮುಂಡಾರು, ಉದ್ಯಮಿ ದಿನೇಶ್ ಕಿಣಿ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕ ದೇವೇಂದ್ರ ಕಾಮತ್ ಉಪಸ್ಥಿತರಿದ್ದರು. ಶಾಂತಿ ಪ್ರಭು ಸ್ವಾಗತಿಸಿದರು. ಹರೀಶ್ ಶೆಟ್ಟಿ ವಂದಿಸಿದರು. ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.