More

    ಆರೋಗ್ಯವಂತರು 3 ತಿಂಗಳಿಗೊಮ್ಮೆ ರಕ್ತ ನೀಡಿ

    ಶಿವಮೊಗ್ಗ: ರಕ್ತದಾನದ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ, ಯಾವುದೇ ತಪ್ಪುಕಲ್ಪನೆ ಹೊಂದಬಾರದು. ಆರೋಗ್ಯವಂತ ಯುವಜನತೆ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

    ಡಿವಿಎಸ್‌ನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರಕ್ತದಾನವು ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಸದೃಢ ಆರೋಗ್ಯಕ್ಕಾಗಿ ಅರ್ಹರಿರುವ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯವಿದೆ ಎಂದರು.
    ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಜನ್ಮದಿನದ ಸಂಭ್ರಮ ಆಚರಣೆಯನ್ನು ರಕ್ತದಾನ ಮಾಡುವ ಮೂಲಕ ಸಾರ್ಥಕ ದಿನ ಆಗಿಸಿಕೊಳ್ಳಿ, ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
    ಡಿವಿಎಸ್ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಆರೋಗ್ಯವಂತ ಯುವ ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ರಕ್ತದಾನ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಜೀವನದ ಅವಧಿಯಲ್ಲಿ ಹೆಚ್ಚು ರಕ್ತದಾನ ಮಾಡಿ ಅನೇಕ ಜೀವ ಉಳಿಸಿದ ಪುಣ್ಯ ಸಿಗುತ್ತದೆ ಎಂದರು.
    ಡಿವಿಎಸ್ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. 50ಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಡಿವಿಎಸ್ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ಮೆಗ್ಗಾನ್ ರಕ್ತನಿಧಿ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಎಸ್.ವೀಣಾ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ್ ಅಪ್ಪಾಜಿ, ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ನ್ಯಾಕ್ ಸಲಹೆಗಾರ ಪ್ರೊ. ಎಚ್.ಎಸ್.ಸುಧಾಕರ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ರೆಡ್‌ಕ್ರಾಸ್ ಘಟಕ ಸಂಯೋಜಕ ಶ್ರೀನಿವಾಸ್ ಲಮಾಣಿ, ಕೇತನಾ ಆರ್ತಿ, ಧರಣೇಂದ್ರ ದಿನಕರ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts