

ಹೆಬ್ರಿ: ಯುವಶಕ್ತಿ ಭಾರತದ ಪ್ರಮುಖ ಸಂಪತ್ತು. ಯುವಜನಾಂಗವನ್ನು ಸೂಕ್ತ ದಾರಿಯಲ್ಲಿ ಮುನ್ನಡೆಸಿದರೆ ದೇಶ ವೇಗವಾಗಿ ಅಭಿವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತರುವಂತಹ ಕೆಲಸ ಮಾಡಬೇಕು ಎಂದು ಜನಜಾಗೃತಿ ವೇದಿಕೆ ಸದಸ್ಯ ಸುರೇಶ್ ಶೆಟ್ಟಿ ಬೆಳ್ವೆ ಹೇಳಿದರು.
ಮುದ್ರಾಡಿಯ ಎಂಎನ್ಡಿಎಸ್ಎಂ ಅನುದಾನಿತ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ತಾಲೂಕು ಮುದ್ರಾಡಿ ವಲಯ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುದ್ರಾಡಿ ಗ್ರಾಪಂ ಸದಸ್ಯ ಗಣಪತಿ ಎಂ. ಉದ್ಘಾಟಿಸಿದರು. ಮುಖ್ಯಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿದ್ದರು. ರಘುಪತಿ ಹೆಬ್ಬಾರ್, ಮಹೇಶ್ ಎನ್.ಕೆ., ಚಂದ್ರಕಾಂತಿ ಹೆಗ್ಡೆ, ಮಹೇಶ ಎಂ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಮತಾ ವಂದಿಸಿದರು. ಸುಮಲತಾ ನಿರೂಪಿಸಿದರು.