ಆನೇಕಲ್: ಅಪಘಾತದಲ್ಲಿ ಮೃತಪಟ್ಟ ಯುವಕನ ಹೃದಯವನ್ನು ಬಾಲಕಿಗೆ ಕಸಿ ಮಾಡುವಲ್ಲಿ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿಯಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ಯುವಕನ ಹೃದಯವನ್ನು ಕುಟುಂಬದವರ ಸಮ್ಮತಿ ಮೇರೆಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಕಸಿ ಮಾಡಲಾಗಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೊಪ್ಪಳ ಮೂಲದ 6ನೇ ತರಗತಿ ವಿದ್ಯಾರ್ಥಿನಿ ಬೊಮ್ಮಸಂದ್ರ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.