

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡಿನಲ್ಲಿ ನಡೆದ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಆತಿಥೇಯರು 6 ವಿಕೆಟ್ಗಳ ಜಯ ಸಾಧಿಸಿದ್ದು, ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಟೆಸ್ಟ್ ಸರಣಿಯಲ್ಲಿ ಜಯ ಸಾಧಿಸುವ ಮೂಲಕ ಆಸ್ಟ್ರೇಲಿಯಾ ತಂಡವು ವಿಶ್ವಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು (Team India) ಮೊದಲ ಇನ್ನಿಂಗ್ಸ್ನಲ್ಲಿ 185 ರನ್ಗಳಿಗೆ ಆಲೌಟ್ ಆಯಿತು. ಪ್ರಥಮ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 181 ರನ್ಗಳಿಗೆ ಆಲೌಟ್ ಆಗುವ ಮೂಲಕ 4 ರನ್ಗಳ ಹಿನ್ನಡೆಯನ್ನು ಅನುಭವಿಸಿತು. ಈ ಮೂಲಕ ಭಾರತ ಬೌಲರ್ಗಳು ಆತಿಥೇಯರ ವಿರುದ್ಧ ಪ್ರಾಬಲ್ಯ ಸಾಧಿಸಿದರು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡವು (Team India) ರಿಷಭ್ ಪಂತ್ ಸ್ಫೋಟಕ ಅರ್ಧಶತಕದ ಫಲ ಹಾಗೂ ಬ್ಯಾಟ್ಸ್ಮನ್ಗಳ ವಿಫಲ ಪ್ರದರ್ಶನದ ಫಲವಾಗಿ 157 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ನಲ್ಲಿನ 4 ರನ್ಗಳ ಹಿನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 162 ರನ್ಗಳ ಗುರಿ ಪಡೆಯಿತು.
ಅಲ್ಪ ಗುರಿಯನ್ನು ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವನ್ನು ಆರಂಭದಲ್ಲೇ ಕಟ್ಟಿ ಹಾಕಿದ ಭಾರತದ (Team India) ಬೌಲರ್ಗಳ ಯಾವುದೇ ಒತ್ತಡಕ್ಕೆ ಒಳಗಾಗದೆ ಗುರಿಯನ್ನು ತಲುಪುವ ಮೂಲಕ ಗೆಲುವಿನ ನಗೆ ಬೀರಿತ್ತು. ಈ ಮೂಲಕ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಸರಣಿಯನ್ನು ಆಸ್ಟ್ರೇಲಿಯಾ 3-1 ಅಂತರದಿಂದ ಗೆದ್ದುಕೊಂಡಿತ್ತು.