More

    ಟೀಮ್​ ಇಂಡಿಯಾ ಆಲ್ರೌಂಡರ್​ ಹಾರ್ದಿಕ್​ ಪಾಂಡ್ಯಗೆ ಗಂಡು ಮಗು

    ಬೆಂಗಳೂರು: ಟೀಮ್​ ಇಂಡಿಯಾ ಆಲ್ರೌಂಡರ್​ ಹಾರ್ದಿಕ್​ ಪಾಂಡ್ಯ ಅಪ್ಪನಾಗಿದ್ದಾರೆ. ಅವರ ಪತ್ನಿ ಹಾಗೂ ನಟಿ ನತಾಶಾ ಸ್ಟಾಂಕೋವಿಕ್​ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ‘ನಮಗೆ ಗಂಡು ಮಗು ಜನಿಸಿದೆ’ ಎಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ 26 ವರ್ಷದ ಹಾರ್ದಿಕ್​ ಪಾಂಡ್ಯ, ಮಗುವಿನ ಕೈ ಹಿಡಿದುಕೊಂಡಿರುವ ಚಿತ್ರವನ್ನೂ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಅಭಿನಂದನೆಗಳ ಸುರಿಮಳೆ ಹರಿದಿದೆ. ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ, ಬ್ಯಾಟ್ಸ್​ಮನ್​ ಕೆಎಲ್​ ರಾಹುಲ್​, ಸ್ಪಿನ್ನರ್​ ಯಜುವೇಂದ್ರ ಚಾಹಲ್​, ಕುಲದೀಪ್​ ಯಾದವ್​, ಸುರೇಶ್ ರೈನಾ, ಆಸ್ಟ್ರೇಲಿಯಾದ ಕ್ರಿಸ್​ ಲ್ಯಾನ್​ ಮತ್ತು ಟೆನಿಸ್​ ತಾರೆ ಸಾನಿಯಾ ಮಿರ್ಜಾ ಮುಂತಾದವರು ಹಾರ್ದಿಕ್​ಗೆ ಅಭಿನಂದನೆ ತಿಳಿಸಿದ್ದಾರೆ. ಬಿಸಿಸಿಐ ಮತ್ತು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಕೂಡ ಟ್ವಿಟರ್​ನಲ್ಲಿ ಅಭಿನಂದನೆ ಸಲ್ಲಿಸಿದೆ.

    ಇದನ್ನೂ ಓದಿ: PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಈ ವರ್ಷದ ಮೊದಲ ದಿನ ಸ್ಟಾಂಕೋವಿಕ್​ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹಾರ್ದಿಕ್​ ಪಾಂಡ್ಯ, ಬಳಿಕ ಮೇನಲ್ಲಿ ಲಾಕ್​ಡೌನ್​ ಸಮಯದಲ್ಲಿ ತಂದೆಯಾಗುತ್ತಿರುವ ವಿಷಯವನ್ನು ಪ್ರಕಟಿಸಿ ಅಚ್ಚರಿ ಮೂಡಿಸಿದ್ದರು. ಈ ನಡುವೆ ಅವರು ಸರಳವಾಗಿ ವಿವಾಹವಾಗಿದ್ದಾರೆ ಎನ್ನಲಾಗಿದೆ. ಸೆರ್ಬಿಯಾ ಮೂಲದ ರೂಪದರ್ಶಿ ನತಾಶಾ ಸ್ಟಾಂಕೋವಿಕ್​, ಕನ್ನಡದ ದನ ಕಾಯೋನು ಸಿನಿಮಾದಲ್ಲೂ ನಟಿಸಿದ್ದಾರೆ. ಹಾರ್ದಿಕ್​ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ಪರ ಕಣಕ್ಕಿಳಿಯಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts