

ತಿರುವನಂತಪುರ: ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯಿದ್ದರೆ, ಅತ್ತ ನೆರೆಯ ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದೆ. ಆ ರಾಜ್ಯದ 3 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇರುವ ಕಾರಣ ಗುರುವಾರದವರೆಗೆ (ಮೇ.9) ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಎರ್ನಾಕುಲಂ, ತ್ರಿಶೂರ್, ಕಣ್ಣೂರು, ಕಾಸರಗೋಡಿನಲ್ಲಿ ಮೇ 10ರವರೆಗೂ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.