More

    18 ಜಿಲ್ಲೆಗಳಲ್ಲಿ ಶಾಖ ಅಲೆ ಮುಂದುವರಿಕೆ:7ರಿಂದ ರಾಜ್ಯದ ಕೆಲವೆಡೆ ಮಳೆ

    ಬೆಂಗಳೂರು: ರಾಜ್ಯದ ಕೆಲವೆಡೆ ಮಳೆ ಸುರಿದರೂ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಕಾಲ ಉಷ್ಣ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಬೆಂಗಳೂರು ನಗರ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೀದರ್​, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಮೇ 9ರವರೆಗೆ ಬಿಸಿ ಗಾಳಿ ಬೀಸಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 4 ದಿನ ಕಾಲ ರಾತ್ರಿ ಬೆಚ್ಚಗಿನ ವಾತಾವರಣ ಕಾಣಿಸಿಕೊಳ್ಳಲಿದೆ. 8 ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ದಾಟಿದೆ. ಶನಿವಾರ ಕಲಬುರಗಿ, ರಾಯಚೂರಿನಲ್ಲಿ ತಲಾ 44 ಡಿ.ಸೆ.ತಾಪಮಾನ ದಾಖಲಾಗಿದೆ. ಕೊಪ್ಪಳ 43.5, ತುಮಕೂರು 41.9, ಬಾಗಲಕೋಟೆ 41.7, ವಿಜಯಪುರ 41.5, ಬೀದರ್​ 41 ಹಾಗೂ ಗದಗ 40.6 ಡಿ.ಸೆ. ಉಷ್ಣಾಂಶ ದಾಖಲಾಗಿದೆ.

    ಅಂಬೇಡ್ಕರ್ ಜೀವನ ಓದಿಕೊಂಡವರು ಕಾಂಗ್ರೆಸ್ಸಿಗೆ ಮತ ಹಾಕುವುದಿಲ್ಲ: ಎನ್. ಮಹೇಶ

    7ರಿಂದ ಮಳೆ ಸಾಧ್ಯತೆ
    ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮೇ 11ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ. ಅದೇರೀತಿ, ಮಳೆ ಜತೆಗೆ ಗಾಳಿಯ ವೇಗವೂ ಹೆಚ್ಚು ಇರಲಿದೆ. ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿಯಲ್ಲಿ ಮುಂದಿನ 4 ದಿನ ಹಾಗೂ ಉಡುಪಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಮೇ 10ರಿಂದ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts