More

    6ರವರೆಗೆ ರಾಜ್ಯದಲ್ಲಿ ಹೀಟ್​ವೇವ್​:13 ಜಿಲ್ಲೆಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಳ

    ಬೆಂಗಳೂರು:ರಾಜ್ಯದ ಹಲವಡೆ ಉಂಟಾಗಿರುವ ಬಿಸಿಗಾಳಿ (ಹೀಟ್​ವೇವ್​) ಏ.6ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಗದಗ, ಉತ್ತರ ಕನ್ನಡ, ದಣ ಕನ್ನಡ, ಉಡುಪಿ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶನಿವಾರದವರೆಗೆ ಬಿಸಿ ಗಾಳಿ ಬೀಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಮಾನ ಏರಿಕೆಯಾಗಲಿದೆ. ಬೆಳಗಾವಿ, ವಿಜಯಪುರ, ಧಾರವಾಡ, ರಾಯಚೂರು, ಹಾವೇರಿಯಲ್ಲಿ ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್​ ಹಾಗೂ ಬೆಂಗಳೂರು, ಬೆಂ.ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ, ಮೈಸೂರಿನಲ್ಲಿ ವಾಡಿಕೆಗಿಂತ 2-3 ಡಿ.ಸೆ.ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಗುರುವಾರ ರಾಜ್ಯದ ಇತರೆ ಜಿಲ್ಲೆಗಳಗಿಂತ ಕಲಬುರಗಿಯಲ್ಲಿ 42.8 ಡಿ.ಸೆ.ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ವಿಜಯಪುರ, ಬಾಗಲಕೋಟೆಯಲ್ಲಿ 40 ಡಿ.ಸೆ., ಗಂಗಾವತಿ, ಗದಗ, ಬೀದರ್​ನಲ್ಲಿ 39 ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದೆ. ಮಂಡ್ಯ 38.2, ಬೆಳಗಾವಿ 37.8, ಮೈಸೂರು 36.9, ಡಿ.ಸೆ.ವರದಿಯಾಗಿದೆ. ಬಾಗಲಕೋಟೆ, ತುಮಕೂರಿನಲ್ಲಿ ವಾಡಿಕೆಗಿಂತ 4-5 ಡಿ.ಸೆ.ಅಧಿಕ ದಾಖಲಾಗಿದೆ.

    ವಿಮಾನ ನಿಲ್ದಾಣದಲ್ಲಿ ದಾಖಲೆ 37.6 ಡಿ.ಸೆ.ಉಷ್ಣಾಂಶ:
    ಬೆಂ.ಗ್ರಾಮಾಂತರ ವ್ಯಾಪ್ತಿಗೆ ಬರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ತಾಪಮಾನದಲ್ಲಿ 37.6 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಅಲ್ಲದೆ, ರಾಜಧಾನಿಯಲ್ಲಿ ಗುರುವಾರ 37 ಡಿ.ಸೆ. ಉಷ್ಣಾಂಶ ಕಂಡುಬಂದಿದೆ. 1996ರ ಮಾ.29ರಂದು 37.3 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿದ್ದು, ನಗರದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚು ಉಷ್ಣಾಂಶ ಇದಾಗಿದೆ. ಮಾರ್ಚ್​ 2ನೇ ವಾರದಿಂದ ಏಪ್ರಿಲ್​ ಮೊದಲ ವಾರವರೆಗೆ 36-37ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ಮಾರ್ಚ್​ನಲ್ಲಿ ವಾಡಿಕೆಯಂತೆ 33 ಡಿ.ಸೆ.ದಾಖಲಾಗಬೇಕಿತ್ತು. ಆದರೆ,ಗರಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2-3 ಡಿ.ಸೆ.ಗಿಂತ ಹೆಚ್ಚು ಉಷ್ಣಾಂಶ ವರದಿಯಾಗುತ್ತಿದೆ. 2017ರ ಮಾ.26 ರಂದು 37.2, 2018ರ ಮಾ.8ರಂದು 37 ಡಿ.ಸೆ. ವರದಿಯಾಗಿತ್ತು. ನಾಲ್ಕು ವರ್ಷದ ಬಳಿಕ ನಗರದಲ್ಲಿ 37.2 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ವರ್ಷದಿಂದ ವರ್ಷಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಕನಿಷ್ಠ ತಾಪಮಾನದಲ್ಲಿಯೂ ಅಧಿಕ ಉಷ್ಣಾಂಶ ಕಂಡುಬರುತ್ತಿದೆ.

    ಮೆಜಿಸ್ಟಿಕ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ವೃದ್ಧ ಬಲಿ

    ಕೆಲವೆಡೆ ಮಳೆ ಮೂನ್ಸೂಚನೆ
    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಏ.8ರಿಂದ ಏ.11ರವರೆಗೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಏ.10 ಮತ್ತು ಏ.11ರಂದು ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕೋಟ್​​

    ಫೆಸಿಫಿಕ್​ ಸಮುದ್ರದ ಪೂರ್ವ ಭಾಗದಲ್ಲಿ ಸಮುದ್ರ ನೀರಿನ ಉಷ್ಣಾಂಶ ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್​ನಿಂದ 1.5 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚು ದಾಖಲಾದರೆ “ಎಲ್​ ನಿನೋ’ ಉಂಟಾಗುತ್ತದೆ. ಜಾಗತಿಕ ನಿಯಂತ್ರಕ ಸೂಚ್ಯಂಕ ಪ್ರಕಾರ ಕಳೆದ ಫೆಬ್ರವರಿಯಿಂದ ದುರ್ಬಲಗೊಂಡು ಮಧ್ಯಮ ಹಂತಕ್ಕೆ ಇಳಿದಿರುವ ಎಲ್​ ನಿನೋ ಕೆಳಹಂತಕ್ಕೆ ಬಂದಿಲ್ಲ. ಈ ಕಾರಣದಿಂದಲೇ ತಾಪಮಾನವೂ ಏರಿಕೆಯಾಗುತ್ತಿದೆ. ಮೇ ಅಥವಾ ಜೂನ್​ನಲ್ಲಿ ಎಲ್​ನಿನೋ ಸಂಪೂರ್ಣ ಶೂನ್ಯಕ್ಕೆ ಬರುವ ಸಂಭವವಿದೆ.
    | ಎ.ಪ್ರಸಾದ್​, ಹವಾಮಾನ ಇಲಾಖೆ ವಿಜ್ಞಾನಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts