More

    ದುಂದು ವೆಚ್ಚದ ವಿವಾಹ ಅನಗತ್ಯ ಎಂದು ವ್ಯಾಖ್ಯಾನಿಸಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ

    ಯಲಬುರ್ಗಾ: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ, ಸರಳ ಸಾಮೂಹಿಕ ವಿವಾಹ ನಡೆಸುವ ಕೆಲಸಕ್ಕೆ ಪ್ರತಿಯೊಬ್ಬರ ಪ್ರೋತ್ಸಾಹ ಅಗತ್ಯ ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ 20ನೇ ವರ್ಷದ ಪಟ್ಟಾಧಿಕಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಆಡಂಬರದ ವಿವಾಹ ಮಾಡುವುದರಿಂದ ಪ್ರಯೋಜನವಿಲ್ಲ. ಧಾರ್ಮಿಕ, ಸಮಾಜಮುಖಿ ಸೇವೆ ಸಲ್ಲಿಸುವ ಮಠಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೆ ಎಲ್ಲರೂ ಕೈಜೋಡಿಸಬೇಕು. ನೂತನ ವಧು-ವರರು ತಮ್ಮ ಜೀವನದಲ್ಲಿ ಎದುರಾಗುವ ಕಷ್ಟ-ಸುಖಗಳನ್ನು ಸಮನಾಗಿ ಸ್ವೀಕರಿಸಿ ಸುಂದರ ಬದುಕು ಕಟ್ಟಿಕೊಳ್ಳಬೇಕು. ಧಾರ್ಮಿಕ ಪರಂಪರೆಯಲ್ಲಿ ಸಂಸ್ಥಾನ ಹಿರೇಮಠದ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು. ಶ್ರೀಗಳಿಗೆ ತುಲಾಭಾರ ಸೇವೆ ನೆರವೇರಿತು. 8 ಜೋಡಿ ದಾಂಪತ್ಯಕ್ಕೆ ಕಾಲಿಟ್ಟವು.

    ಬೆದವಟ್ಟಿಯ ಶ್ರೀ ಶಿವಸಂಗಮೇಶ್ವರ ಸ್ವಾಮೀಜಿ, ಸಂಸ್ಥಾನ ಹಿರೇಮಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಸಿದ್ಧರಾಮಸ್ವಾಮಿ ಹಿರೇಮಠ (ಸಿಹಿ), ಪುರವರ್ಗಮಠದ ಶ್ರೀ ಮಳೆಯೋಗೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ಸಂಗಣ್ಣ ಟೆಂಗಿನಕಾಯಿ, ಅಮರಪ್ಪ ಕಲಬುರ್ಗಿ, ಸಿದ್ರಾಮೇಶ ಬೆಲೇರಿ, ಸಂಗಪ್ಪ ರಾಮತಾಳ, ಮಲ್ಲನಗೌಡ ಹೊಸಮನಿ, ವೀರಭದ್ರಯ್ಯ ಹಿತ್ತಲಮನಿ, ವಿರುಪಾಕ್ಷಯ್ಯ ಗಂಧದ, ನೀಲನಗೌಡ ತಳುವಗೇರಿ, ಎಸ್.ಕೆ.ದಾನಕೈ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts