More

    ರಾಜ್ಯದ ವಿವಿಧೆಡೆ ತಂಪೆರೆದ ವರುಣ; ಕೆಲವೆಡೆ ಜನಜೀವನ ಅಸ್ತವ್ಯಸ್ತ

    ಬೆಂಗಳೂರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ರಾಜ್ಯದ ಜನತೆಗೆ ವರುಣರಾಯ ತಂಪೆರೆದಿದ್ದಾನೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಅದರಂತೆ ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರು, ಗದಗ, ಶಿವಮೊಗ್ಗ ಹಾಗೂ ಹಾವೇರಿಯಲ್ಲಿ ಕೆಲ ಹೊತ್ತು ಗುಡುಗು ಸಹಿತ ಭಾರೀ ಮಳೆಯಾಗಿದೆ.

    Rain

    ಇದನ್ನೂ ಓದಿ: ಐಪಿಎಲ್​ ನಡುವೆಯೇ ನಿವೃತ್ತಿ ಬಗ್ಗೆ ಮಾತನಾಡಿದ ಹಿಟ್​ಮ್ಯಾನ್​; ವಿಡಿಯೋ ವೈರಲ್

    ಮಳೆರಾಯನ ಆಗಮನದಿಂದ ಜನರು ಸಂತಸಗೊಂಡಿದಗ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಸಿಡಿಲು ಬಿಡಿದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ಗ್ರಾಮದಲ್ಲಿ ಮಳೆಯ ವರುಣನ ಆರ್ಭಟಕ್ಕೆ 10ಕ್ಕೂ ಹೆಚ್ಚು ವಿದ್ಯುತ್​ ಕಂಬಗಳು ಧರೆಗುರುಳಿವೆ.

    ಬಿಸಿಲಿನಿಂದ ಬಳಲಿದ್ದ ಬೆಳಗಾವಿಯಲ್ಲಿ ಮಳೆ ಕೆಲಕಾಲ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮಳೆ ನೀರು ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ್ದು, ದಿಢೀರ್​ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ. ಇದಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಹಾಗೂ ಬಾಗಲಕೋಟೆಯಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts