ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆದಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾರಾಂತ್ಯದವರೆಗೆ ಉತ್ತರ ಒಳನಾಡು ಹೊರತುಪಡಿಸಿ ಉಳಿದೆಡೆ ಉತ್ತಮ ಮಳೆಯಾಗಲಿದೆ.
ಇದನ್ನೂ ಓದಿ: 17, 18ರಂದು ಕುಂದಾಪ್ರ ಕನ್ನಡ ಹಬ್ಬ; ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ
ಗುರುವಾರ ಹಾಗೂ ಶುಕ್ರವಾರ ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರಿ ವರ್ಷಧಾರೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಈರುಳ್ಳಿ ಬೆಳೆ ಜಲಾವೃತ: ಚಿತ್ರದುರ್ಗ, ದಾವಣಗೆರೆಯಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಯಿತು. ಅಗಳೇರಿ, ಬುದ್ಧನಗರ, ರೈಲ್ವೆ ನಿಲ್ದಾಣ ಸೇರಿ 45ಕ್ಕೂ ಹೆಚ್ಚು ಮನೆಗಳಿಗೆ, ಬಿ.ಡಿ.ರಸ್ತೆಯ ಐದಾರು ಅಂಗಡಿಗಳಿಗೆ ನೀರು ನುಗ್ಗಿತು. ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಅಡಕೆ, ರಾಗಿ, ಈರುಳ್ಳಿ ಸೇರಿ 70 ಹೆಕ್ಟೇರ್ಗಿಂತ ಹೆಚ್ಚು ಬೆಳೆ ಹಾನಿಯಾಗಿದೆ. ಜಗಳೂರು ತಾಲೂಕಿನಲ್ಲಿ ಅಡಕೆ, ಈರುಳ್ಳಿ, ಶೇಂಗಾ, ಮೆಕ್ಕೆಜೋಳದ ಹೊಲಗಳು ಜಲಾವೃತವಾಗಿವೆ. ಚನ್ನಗಿರಿ ತಾಲೂಕು ಮಂಗೇನಹಳ್ಳಿಯಲ್ಲಿ ಭತ್ತದ ಗದ್ದೆಗಳು ಜಲಾವೃತವಾಗಿವೆ.
ಕಳೆದ 34 ದಿನದಿಂದ ಊಟ ಮಾಡಿಲ್ಲ! 1.2 ಕೋಟಿ ರೂ. ಸಾಲವಿದೆ, ಕೈಯಲ್ಲಿ ಕೆಲಸವಿಲ್ಲ: ಕಣ್ಣೀರಿಟ್ಟ ನಟ
ಇರೋದು 4 ಜನ, 4 ಬಲ್ಬ್, 4 ಫ್ಯಾನ್… 20 ಲಕ್ಷ ರೂ. ಕರೆಂಟ್ ಬಿಲ್ ಪಡೆದ ಕುಟುಂಬ ಕಂಗಾಲು