ಮುಂದಿನ ಎರಡು ದಿನ ಈ ರಾಜ್ಯದ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ!; ಹವಾಮಾನ ಇಲಾಖೆ ಎಚ್ಚರಿಕೆ

ವಿಜಯವಾಣಿ (79)
Published on

ತಮಿಳುನಾಡು: ಡಿಸೆಂಬರ್ 17 ಮತ್ತು 18 ತಮಿಳುನಾಡು ಮತ್ತು ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಇದೀಗ ಎರಡು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ತೂತುಕುಡಿ, ರಾಮನಾಥಪುರಂ, ತಿರುನೆಲ್ವೇಲಿ, ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ತಿರುನಲ್ವೇಲಿ ಮತ್ತು ತೆಂಕಶಿ ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈಗಾಗಲೇ ನಗರ ಪ್ರದೇಶಗಳು ಜಲಾವೃತಗೊಂಡಿದೆ.

ಹವಾಮಾನ ಪರಿಸ್ಥಿತಿಗಳಿಗೆ ಪ್ರತಿಕ್ರಿಯೆಯಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ನಾಲ್ಕು ತಂಡಗಳನ್ನು ತೂತುಕುಡಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿಯಲ್ಲಿ ರಕ್ಷಣಾ ಸಾಧನಗಳೊಂದಿಗೆ ನಿಯೋಜನೆಗೊಂಡಿದೆ. ಮೈಚಾಂಗ್ ಚಂಡಮಾರುತದಿಂದ ಉಂಟಾದ ವಿಪರೀತ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ 6,000 ರೂ. ಅನ್ನು ಪರಿಹಾರ ಹಣವಾಗಿ ವಿತರಿಸಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net