ಸತತ 16 ದಿನ ಕಳೆದರೂ ಬಿಡುವು ನೀಡದ ಮಳೆ: ರಾಜ್ಯದಲ್ಲಿ ಪ್ರವಾಹ ಭೀತಿ?

Heavyrain
Published on

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ 16 ದಿನಗಳು ಕಳೆದರೂ ಬಿಡುವು ನೀಡುತ್ತಿಲ್ಲ.

ಮುಂದಿನ ದಿನಗಳಲ್ಲಿ ಇನ್ನಷ್ಟು ವರುಣನ ಆರ್ಭಟವಾಗಲಿದ್ದು, ಇದರಿಂದ ರಾಜ್ಯದಲ್ಲಿ ಪ್ರವಾಹ ಆತಂಕ ತಂದೊಡ್ಡಿದೆ. ಜತೆಗೆ, ರೈತರು ಬದುಕು ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ. ಜು.1ರಿಂದ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಪ್ರಮುಖ ಜಲಾಶಯಗಳ ಹಾಗೂ ನದಿಗಳು ಉಕ್ಕಿ ಹರಿಯುತ್ತಿವೆ. ಇದೀಗ ಮತ್ತೆ ಮಳೆ ಸುರಿದರೆ ಪ್ರಕೃತಿಕ ವಿಕೋಪ ಸಂಭವಿಸುವ ಸಾಧ್ಯತೆ ಹೆಚ್ಚಿದೆ.

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರಿಯಲಿದ್ದು, ಶನಿವಾರ ಉತ್ತರ ಕನ್ನಡದಲ್ಲಿ ಹಲವು ಭಾಗಗಳಲ್ಲಿ ಸರಾಸರಿ 15 ಸೆಂಮೀ, ಬೆಳಗಾವಿಯ ಲೋಂಡ 9 ಸೆಂಮೀ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 8 ಸೆಂಮೀ ಮಳೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜು.17ರಿಂದ ಜು.20ರವರೆಗೆ ಭಾರಿ ಮಳೆ ಬೀಳುವ ಮೂನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಅಗಾಗ್ಗೆ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net