More

    ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು; ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ

    ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬುಧವಾರವೂ ವರುಣಾರ್ಭಟ ಮುಂದುವರಿದ್ದು, ಮುಂದಿನ 4 ದಿನ ಇನ್ನೂ ಹೆಚ್ಚು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಹಾವೇರಿಯ ಗುಟ್ಟಲ್, ಯಾದಗಿರಿಯ ಕಕ್ಕೇರಿ, ಗದಗ, ತುಮಕೂರಿನ ತಿಪಟೂರು, ಚಿಕ್ಕಮಗಳೂರಿನ ಅಜ್ಜಂಪುರ, ಮಂಗಳೂರು, ಉಡುಪಿ ಬ್ರಹ್ಮವಾರ ಮತ್ತು ಪುತ್ತೂರಿನಲ್ಲಿ ಸರಾಸರಿ 10-12 ಸೆಂಮೀ ಮಳೆ ಬಿದ್ದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಸುರಿಯುತ್ತಿರುವ ಮಳೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹಾಸನ, ಶಿವಮೊಗ್ಗ, ಬಾಗಲಕೋಟೆ, ಯಾದಗಿರಿ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಸೆ.8 ಮತ್ತು ಸೆ.9ರಂದು ಯೆಲ್ಲೋ ಅಲರ್ಟ್ ಇರಲಿದೆ.

    ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆ ಆರ್ಭಟ ಇದ್ದರೆ, ಉಳಿದೆಡೆ ಆಗಾಗ್ಗೆ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್​ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..

    62 ವರ್ಷಗಳ ಹಿಂದೆ ಕಳವಾಗಿದ್ದ ನಟರಾಜ ಮೂರ್ತಿ ನ್ಯೂಯಾರ್ಕ್​ನಲ್ಲಿ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts