

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರಿಯಲಿದೆ. ಭಾನುವಾರವೂ ರಾಜ್ಯದ ಕೆಲ ಭಾಗಗಳಲ್ಲಿ ಜೋರು ಮಳೆಯಾಗಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಮುಂದಿನ 48 ಗಂಟೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗದಲ್ಲಿ ನ.8ರಂದು ವ್ಯಾಪಕವಾಗಿ ಮಳೆ ಬೀಳಲಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.