More

  Auto Draft

  ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಹುತೇಕ ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆ ಬಿದ್ದಿದೆ. ಬಂಡೀಪುರದ ಅರಣ್ಯ ಪ್ರದೇಶಗಳು,ಪಟ್ಟಣ, ಬರಗಿ, ಬೇಗೂರು ಹಾಗೂ ತೆರಕಣಾಂಬಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸಂಜೆ ಭಾರಿ ಮಳೆ ಸುರಿದಿದೆ.


  ಬೇಗೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಬಿದ್ದು, ಜಮೀನುಗಳಲ್ಲಿ ನೀರು ನಿಂತಿದೆ. ಇತ್ತೀಚೆಗೆ ರೈತರು ತಮ್ಮ ಜಮೀನುಗಳಲ್ಲಿ ಸೂರ್ಯಕಾಂತಿ, ಜೋಳ ಹಾಗೂ ಹತ್ತಿ ಬಿತ್ತನೆ ಮಾಡಿದ್ದು, ಬೆಳೆ ನಷ್ಟದ ಆತಂಕ ಎದುರಾಗಿದೆ.

  ರಾಷ್ಟ್ರೀಯ ಹೆದ್ದಾರಿ ಮೇಲೆ ಹಾಗೂ ರಸ್ತೆಯ ಬದಿಯ ಹಳ್ಳ ಕೊಳ್ಳಗಳಲ್ಲಿ ಪ್ರವಾಹೋಪಾದಿಯಲ್ಲಿ ಮಳೆನೀರು ಹರಿಯುತ್ತಿದೆ. ಇದರಿಂದಾಗಿ ಸವಾರರು ಹೆಡ್‌ಲೈಟ್ ಹಾಕಿಕೊಂಡು ವಾಹಕಗಳನ್ನು ಚಲಾಯಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts