ಬೆಂಗಳೂರು: ರಾಜ್ಯದಲ್ಲಿ ಹಲವು ದಿವಸಗಳ ಕಾಲ ‘ರೆಡ್ ಅಲರ್ಟ್ ಪಡೆದಿದ್ದ’ ಜಿಲ್ಲೆಗಳಾದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಎರಡು ಜಿಲ್ಲೆಗಳಿಗೆ ಮಳೆ ಪೂರ್ತಿ ಕಡಿಮೆ ಆಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಜುಲೈ 29, 30ರಂದು ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ನಿನ್ನೆ ವರುಣನ ಆರ್ಭಟ ಜೋರಾಗಿಯೇ ಇತ್ತು. ಇಂದೂ ಸಹಿತ ಬಾರೀ ಮಳೆಯಾಗುವ ಮುನ್ಸೂಚನೆಯನ್ನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ 28 ರಿಂದ ಆಗಷ್ಟ್ 1 ರವರೆಗೆ ಹಗುರ ಮಳೆಯಾಗಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 29 ಕ್ಕೆ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಮಾತ್ರವೇ ಭಾರೀ ಮಳೆ ಆಗಲಿದೆ. ಹೀಗಾಗಿ ಮೇಲಿನ ಈ ಮೂಲಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆ ಬರಬಹುದು ಎಂದು ಇಲಾಖೆ ಅಂದಾಜಿಸಿದೆ.
ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‌ಎಸ್, ಕಬಿನಿ, ಕೃಷ್ಣ, ಘಟಪ್ರಭ, ಹಾರಂಗಿ, ಹೇಮಾವತಿ, ಆಲಮಟ್ಟಿ ಹೀಗೆ ರಾಜ್ಯದ ಪ್ರಮುಖ ಡ್ಯಾಂಗಳ ಹೊರ ಹರಿವು ಹೆಚ್ಚಾಗಿದ್ದು, ಇದೇ ವಾತಾವರಣ ಮುಂದುವರಿದರೆ, ಮುಂದಿನ ಒಂದು ವಾರದಲ್ಲಿ ಹವಾಮಾನ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಗಳಿವೆ.
ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ ಇನ್ನಿತರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಕಡಿಮೆ ಆಗಿದೆ. ಆಗಾಗ ತುಂತುತು ಮಳೆ ಬರುತ್ತಿದೆ. ಮುಂದಿನ ಮೂರು ದಿನ ಇದೇ ವಾತಾವರಣ ಮುಂದುವೆಯಲಿದೆ. ಹಾಗಾಗಿ ಈ ಪ್ರದೇಶಗಳಲ್ಲಿ ಹೆಚ್ಚು ಮಳೆ ಇಲ್ಲ ಎನ್ನಲಾಗಿದೆ.
ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆ ಆಗಿದ್ದು, ಪ್ರವಾಹ ಪೀಡಿತ ಜನರು, ನಿಟ್ಟುಸಿರು ಬಿಡುವಂತಾಗಿದೆ. ಭಾನುವಾರದಿಂದ ಮಳೆ ಇಳಿಕೆ ಆಗಲಿದೆ. ಒಂದೆರಡು ಜಿಲ್ಲೆಗಳಲ್ಲಿ ಮಾತ್ರವೇ ಸಾಧಾರಣದಿಂದ ಮಳೆ ಬರಲಿದೆ.