More

    ರಾಜ್ಯದ ವಿವಿಧೆಡೆ ತಂಪೆರೆದ ವರುಣ; ಸಿಡಿಲಿನ ಹೊಡೆತಕ್ಕೆ ನೆಲಕುರುಳಿದ ಐತಿಹಾಸಿಕ ಮೆಹೆತರ್ ಮಹಲ್‌

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ರಾಜ್ಯದ ಜನತೆಗೆ ವರುಣರಾಯ ಕೃಪೆ ತೋರಿದ್ದು ಕೆಲಕಾಲ ಮಳೆ ಸುರಿಸುವ ಮೂಲಕ ತಂಪೆರೆದಿದ್ದಾನೆ. ಆದರೆ, ಕೆಲ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಅವಾಂತರ ಸೃಷ್ಟಿಯಾಗಿದೆ.

    ಇನ್ನೂ ವಿಜಯಪುರ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನರಲ್ಲಿ ಮಂದಹಾಸ ಮೂಡಿಸಿದೆ. ವಿಜಯಪುರ ಹೊರತುಪಡಿಸಿ ರಾಜ್ಯದ ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಗದಗ, ಮಂಡ್ಯ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.

    ಇದನ್ನೂ ಓದಿ: ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​; ಹತ್ಯೆ ಮಾಡಿದ್ದು ಕ್ಲಾಸ್​ಮೇಟ್​ ಫಯಾಜ್

    ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ನಾಕಾ ರಸ್ತೆಯಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿದಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇತ್ತ ಸಿಡಿಲು ಬಡಿದು ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್‌ಗೆ ಹಾನಿಯಾಗಿದೆ.

    ವಿಜಯಪುರದಲ್ಲಿ ಗುರುವಾರ ಸಂಜೆ ಏಕಾಏಕಿ ಗುಡುಗು- ಮಿಂಚು ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಸಿಡಿಲು ರಭಸವಾಗಿ ಸ್ಮಾರಕಕ್ಕೆ ಬಡಿದಿದೆ. ಸಿಡಿಲು ಬಡಿದ ರಭಸಕ್ಕೆ ಮೆಹ್ತರ್ ಮಹಲ್ ಮೇಲ್ಭಾಗದ ಗೋಪುರ ಕುಸಿದು ಬುದ್ದಿದ್ದು ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು ಹಾಗೂ ಬೈಕ್​ಗಳು ಜಖಂಗೊಂಡಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts