More

    ಮಳೆ ಅಬ್ಬರ; ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

    ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ, ಅವಾಂತರ ಮುಂದುವರೆದಿದೆ. ಅಕಾಲಿಕ ಗಾಳಿ ಮಳೆಗೆ ಹಲವೆಡೆ ಮಳೆ ಅವಾಂತರವಾಗಿದ್ದು, ಸಾವು-ನೋವು ಸಂಭವಿಸಿದೆ.

    ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಇಂದೂ ಕೂಡ ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಲ್ಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ.

    ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇದೆ.

    ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದ್ದು, 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಸೋಮವಾರ (ಏ. 22) ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌  ಎಚ್ಚರಿಕೆ ನೀಡಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ.

    ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts