More

    ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಕೊಡಗು ಮತ್ತು ಹಾಸನದಲ್ಲಿ ನ.2ರಿಂದ ನ.5ರವರೆಗೆ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ನ.3ರಿಂದ ಮುಂದಿನ 3 ದಿನ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ನ.5ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts