More

    ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ 

    ಬೆಂಗಳೂರು: ರಾಜ್ಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಬೆಳಗ್ಗೆ ಮೋಡ ಕವಿದ ವಾತಾವರಣ ,ಕೆಲವೊಮ್ಮೆ ಬಿಸಿಲು ಸಂಜೆ ಬಳಿಕ ಜೋರು ಮಳೆ ಹೀಗೆ ಏಕಾಎಕಿ ಉಂಟಾಗಿರುವ ಹವಾಮಾನ ವೈಪರಿತ್ಯಗಳ ಕುರಿತಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲೂ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ. ಕೊನೆಯ ಮೂರು ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

    ಇದನ್ನೂ ಓದಿ: ಕರೊನಾ ಹೋಯ್ತಲ್ಲ ಅಂತ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಎಚ್ಚರಿಕೆ ನೀಡಿದ ಡಬ್ಲ್ಯುಎಚ್​ಒ

    ದಕ್ಷಿಣ ಒಳನಾಡಿನ 17 ಜಿಲ್ಲೆಗಳ ಬಹುತೇಕ ಕಡೆ ಜೋರು ಮಳೆ ಸಾಧ್ಯತೆ ಇದೆ. ಗಾಳಿ ಕೂಡ 40-50 km ವೇಗದಲ್ಲಿ ಬೀಸಲಿದೆ. ಉತ್ತರ ಒಳನಾಡು, ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಗುಡುಗು ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ನಗರದಲ್ಲಿ ಪ್ರತಿ ದಿನ ಬೆಳಗ್ಗೆ ಎಂದಿನಂತೆ ಬಿಸಿಲು ಕಂಡು ಬರುತ್ತದೆ. ಸಂಜೆ ಹೊತ್ತಿಗೆ ಇಲ್ಲವೇ ಸಂಜೆ ನಂತರ ತಡರಾತ್ರಿವರೆಗೆ ಜೋರು ಮಳೆ ಸುರಿದು ಹಲವು ಆವಾಂತರಗಳನ್ನು ಸೃಷ್ಟಿಸುತ್ತಿದೆ. ಗುರುವಾರ ವರೆಗೆ ಸಂಜೆ ನಂತರ ನಗರದ ಹಲವೆಡೆ ವ್ಯಾಪಕ ಮಳೆಯ ಆಗಮನವಾಗಲಿದೆ. ಒಳಚರಂಡಿ ಉಕ್ಕಿ ಹರಿಯುವ ಕಡೆ, ರಸ್ತೆ ಅಂಡರ್‌ಪಾಸ್, ರೈಲ್ವೆ ಅಂಡರ್‌ಪಾಸ್‌ ಸೇರಿದಂತೆ ಇನ್ನಿತರ ತಗ್ಗು ಪ್ರದೇಶಗಳಲ್ಲಿ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

    ಹೊಸ ಸಂಸತ್​ ಭವನದಲ್ಲಿ ಪ್ರಧಾನಿಯಿಂದ ರಾಜದಂಡ ಸೆಂಗೋಲ್​ ಸ್ಥಾಪನೆ: ತಮಿಳಿನ ಸೆಂಗೋಲ್ ಹಿನ್ನೆಲೆ ಇಲ್ಲಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts