Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಉಡುಪಿಯಲ್ಲಿ ಭಾರಿ ಮಳೆ: ಬೋಟ್​ ಮೂಲಕ ಗರ್ಭಿಣಿ ರಕ್ಷಣೆ

Saturday, 07.07.2018, 7:43 PM       No Comments

ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು ಶನಿವಾರವೂ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನ ಬಳಿ ತಗ್ಗು ಪ್ರದೇಶದಲ್ಲಿ ನೀರು ತುಂಬಿತ್ತು. ಇದರಿಂದಾಗಿ ಗರ್ಭಿಣಿ ಸೇರಿದಂತೆ ಹಲವು ಕುಟುಂಬಗಳು ಮನೆಯಿಂದ ಹೊರಬರಲಾಗದೆ ಸಂಕಷ್ಟಕ್ಕೆ ಸಿಲುಕಿದ್ದರು.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಬೋಟ್​ ಮೂಲಕ ಗರ್ಭಿಣಿ ಮತ್ತು ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ನಿಟ್ಟೂರು, ಕೊಡಂಕೂರು, ಬೈಲಕೆರೆಯಲ್ಲೂ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ತುಂಬಿತ್ತು. ರಕ್ಷಣಾ ತಂಡ ದೋಣಿ ಮೂಲಕ ಸುಮಾರು 70 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

Back To Top