Heavy rain | ಭಾರೀ ಮಳೆಯಿಂದ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ದಾರುಣ ಅಂತ್ಯ

Mahakal temple
Published on

ನವದೆಹಲಿ: ಭಾರಿ ಮಳೆಗೆ ಪ್ರಸಿದ್ಧ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿತವಾಗಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಾರೀ ಮಳೆಗೆ ಮಹಾಕಾಳೇಶ್ವರ ದೇವಸ್ಥಾನದ ಹೊರಭಾಗದ ಗೋಡೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ಇನ್ನೂ ಇಬ್ಬರು ಸಿಲುಕಿ ಗಾಯಗೊಂಡಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಜ್ಜಯಿನಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳಲ್ಲಿ ನೀರು ಸಂಗ್ರಹವಾಗಿದೆ.

ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಐದು ವ್ಯಕ್ತಿಗಳನ್ನು ಅವಶೇಷಗಳಿಂದ ಹೊರತೆಗೆಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದೇವಸ್ಥಾನದಲ್ಲಿ ಸಂಜೆಯ ಆರತಿಗೆ ಮುನ್ನವೇ ಈ ಅವಘಡ ಸಂಭವಿಸಿದ್ದು, ಸತತ ಧಾರಾಕಾರ ಮಳೆಯಿಂದಾಗಿ ಹಲವೆಡೆ ತೊಂದರೆಯಾಗುತ್ತಿದೆ.

ಉಜ್ಜಯಿನಿ ಡಿಎಂ ನೀರಜ್ ಕುಮಾರ್ ಸಿಂಗ್ ಮಾತನಾಡಿ, ಭಾರೀ ನೀರಿನ ಹರಿವಿನಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಿದರು. ಗೋಡೆ ಕುಸಿತದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net