More

    ಉತ್ತರ ಒಳನಾಡಿನಲ್ಲೂ ಚುರುಕು ಪಡೆದ ಮುಂಗಾರು: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

    ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಈಗ ಉತ್ತರ ಒಳನಾಡಿನಲ್ಲೂ ಚುರುಕು ಪಡೆದಿದೆ.

    ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.11ರಿಂದ ಮುಂದಿನ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಹಾಗು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಜೋರು ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಅಲ್ಲದೆ, ಈ ಭಾಗಗಳಲ್ಲಿ ಜು,12,13ರಂದು ಹಾಗೂ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಮೈಸೂರಿನಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ.

    ದಕ್ಷಿಣ ಒಳನಾಡಿನಲ್ಲಿ ಅಗಾಗ್ಗೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ಸರಾಸರಿ 15 ಸೆಂಮೀನಿಂದ 20 ಸೆಂಮೀವರೆಗೆ ಮಳೆ ಬಿದ್ದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts