More

    ಭಾರೀ ಮಳೆ ಅವಾಂತರ: ಕೊಡಗು ಜಿಲ್ಲೆಗೆ ಇಂದಿನಿಂದ ಈ ವಾಹನಗಳಿಗಿಲ್ಲ ಪ್ರವೇಶ, ಜಿಲ್ಲಾಧಿಕಾರಿಗಳಿಂದ ಆದೇಶ

    ಕೊಡಗು: ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನಲೆಯಲ್ಲಿ ಸ್ಥಳೀಯ ಜನರಲ್ಲಿ ಭಯ ಶುರುವಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ 2018ರಲ್ಲಾದ ಪರಿಸ್ಥಿತಿ ಎದುರಾಗಲಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ.

    ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿಷೇಧಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂ ಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್​ 15ರವರೆಗೆ ಸಂಪೂರ್ಣವಾಗಿ ಸಂಚಾರ ನಿಷೇಧಿಸಲಾಗಿದೆ.

    16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆ್ಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ. ಆದರೆ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್​ ಅವರು ಆದೇಶ ಹೊರಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಅಮರನಾಥದಲ್ಲಿ ಮೇಘಸ್ಫೋಟ: ಬಂಟ್ವಾಳದ 30 ಯಾತ್ರಿಕರ ತಂಡ ಸೇಫ್, ನಾಳೆ ಸಿಗಲಿದೆ ದರ್ಶನ ಭಾಗ್ಯ

    ಮೇಘಸ್ಫೋಟಕ್ಕೂ ಕೆಲವೇ ಕ್ಷಣದ ಮುನ್ನ ಕೈಗೊಂಡ ನಿರ್ಧಾರದಿಂದ ಅಪಾಯದಿಂದ ಪಾರಾದ ಬಿಜೆಪಿ ಶಾಸಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts