More

    ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನಗರದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    ಇದನ್ನೂ ಓದಿ: ಒಂದೇ ರೋಲ್​ ನಂಬರ್, ಒಂದೇ ರ‍್ಯಾಂಕ್, ಮೊದಲ ಹೆಸರೂ ಕೂಡ ಒಂದೇ! ಏನಿದು ಯುಪಿಎಸ್​ಸಿಯ ನಿಗೂಢತೆ?

    ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಐದು ದಿನಗಳವರೆಗೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

    ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

    ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಡಬಲ್​ ಮರ್ಡರ್​: ಬೆಚ್ಚಿಬಿದ್ದ ಧಾರವಾಡದ ಜನತೆ

    ಯೋಗ ಕ್ಷೇಮ | ಜೈನದರ್ಶನದ ಮೂಲಾಧಾರ ಯಮ-ನಿಯಮ

    ಸಂಪಾದಕೀಯ | ಅರ್ಹರಿಗಷ್ಟೆ ಸಿಗಲಿ; ಬಿಪಿಎಲ್ ಕಾರ್ಡಿಗೆ ಹೆಚ್ಚಿದ ಬೇಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts