More

    ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಇದನ್ನೂ ಓದಿ: ಇಂದು ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ಮತಬೇಟೆ: BJP ಸಮಾವೇಶಕ್ಕೆ ಬರುವವರಿಗೆ ಹಲವು ನಿರ್ಬಂಧ

    ರಾಜ್ಯದ ಬೀದರ್, ಕಲಬುರುಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೇ 3 ರವರೆಗೆ ಭಾರಿ ಮಳೆಯಾಗಲಿದೆ.

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆಯಾಗಿದೆ. (ದಿಗ್ವಿಜಯ ನ್ಯೂಸ್​)

    ಬೆಂಗಳೂರಲ್ಲಿ ಅಂಬರೀಷ್ ರಸ್ತೆ ಇದೆ, ಮೈಸೂರಲ್ಲೂ ಇದೆ, ಮಂಡ್ಯದಲ್ಲೇಕೆ ಇಲ್ಲ? ನೀವೇ ಪ್ರಶ್ನಿಸಿ: ಸುಮಲತಾ

    ಭೂವ್ಯಾಜ್ಯ ಸಂಬಂಧ ಗುಂಪು ಘರ್ಷಣೆ; ಐವರಿಗೆ ಗಾಯ, 5 ಬೈಕ್​ಗಳು ಸುಟ್ಟು ಕರಕಲು

    ನಾಯಕಿ ಅದಾ ಶರ್ಮಾ ಮನದಾಳದ ಮಾತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts