More

    30ರಿಂದ ಹಿಂಗಾರು ಚುರುಕು: ಅ.30, 31ರಂದು ಭಾರಿ ಮಳೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಅ.30ರಿಂದ ಈಶಾನ್ಯ ಮಾರುತ(ಹಿಂಗಾರು ಮಳೆ) ಚುರುಕಾಗಲಿದೆ.

    ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಕ್ಷಿಣ ಒಳನಾಡಿನ ರಾಮನಗರ ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಅ.30, 31ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ೋಷಿಸಿದೆ.

    ಬೆಂಗಳೂರು, ಬೆಂ.ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಅ.31ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕಳೆದ ಅ.26ರಂದು ನೈಋತ್ಯ ಮಾರುತ ಅವಧಿ ( ಮುಂಗಾರು ಮಳೆ) ಮುಗಿದಿದೆ. ರಾಜ್ಯದ ವಿವಿಧೆಡೆ ಈಗಾಗಲೆ ಹಿಂಗಾರು ಮಳೆಯಾಗುತ್ತಿದೆ.

    21ರ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕ: ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

    ಹೈಕೋರ್ಟ್​ ಮುಂದೆ ಬಿಬಿಎಂಪಿ ಕಮಿಷನರ್​! ಅಕ್ರಮ ಕಟ್ಟಡ ತೆರವಿಗೆ ಡೆಡ್​ಲೈನ್​

    ರಾಜ್ಯ ಸರ್ಕಾರಿ ನೌಕರರಿಗೂ ಸಿಹಿಸುದ್ದಿ: ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts