More

    ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ..

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳಲಿದೆ. ಶನಿವಾರವೂ ರಾಜ್ಯದ ಹಲವೆಡೆ ಮಳೆಯಾಗಿದ್ದು, ತುಮಕೂರಿನ ಮಧುಗಿರಿಯಲ್ಲಿ 29 ಮಿಮೀ ಮಳೆ ಸುರಿದಿದೆ.

    ಅಸಾನಿ ಚಂಡಮಾರುತ ದುರ್ಬಲಗೊಂಡ ಪರಿಣಾಮ ಮಳೆ ಕುಂಠಿತವಾಗುವ ಮುನ್ಸೂಚನೆ ಸಿಕ್ಕಿದ್ದರೂ ದಿಢೀರ್ ಹವಾಮಾನ ಬದಲಾವಣೆಯಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಧಾರವಾಡ, ಬಳ್ಳಾರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿಯಲ್ಲಿ ಮೇ 15, 16ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ತೇವಾಂಶ ಭರಿತ ಮೋಡಗಳು ಹಾಗೂ ಸತತ ಮಳೆ ಸುರಿದ ಪರಿಣಾಮದಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದೆ.

    ‘ಸಿಎಂ ಆಗಿ ಆ ಕೆಲ್ಸ ಮಾಡೋಕಾಗಲ್ಲ, ಅದ್ಕೆ ಕಾರ್ಯಕರ್ತ ಆಗಿರ್ಬೇಕು..’ ಅಂತ ರಾಜೀನಾಮೆ ಕೊಟ್ಟ ಮುಖ್ಯಮಂತ್ರಿ!

    ಬೆಳಗಿನ ಜಾವ ಮನೆ ಬಾಗಿಲು ತೆರೆದವರಿಗೆ ಕಾದಿತ್ತು ಅಚ್ಚರಿ!; ನಾನೇ ಇಟ್ಕೋತೀನಿ ಅಂದ್ರೂ ಪೊಲೀಸರು ಬಿಡಲಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts