More

    ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣದ ಬಳಿಕ ಭಾರೀ ಮಳೆ ಆರಂಭವಾಗಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ರಾಜ್ಯದತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ನಾಳೆ ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು ಬಹುತೇಕ ಕಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಹುಮ್ನಾಬಾದ್​ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ!

    ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

    ನಾಳೆ ಕೋಲಾರ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್)

    ಜೂನ್ 1 ರಿಂದ ನೀವು ಕರೆಂಟ್ ಬಿಲ್​ ಕಟ್ಟಬೇಡಿ: ಮಳವಳ್ಳಿಯಲ್ಲಿ ಡಿ.ಕೆ. ಶಿವಕುಮಾರ್​ ಹೇಳಿಕೆ

    ರಾಹುಲ್ ಗಾಂಧಿಗೆ ಬುದ್ದಿ ಭ್ರಮಣೆಯಾಗಿದ್ದು ಮೆಡಿಕಲ್ ಚೆಕಪ್ ಮಾಡಿಸಿಕೊಳ್ಳಲಿ: ಬಿಎಸ್​ವೈ

    ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts