ಜೂನ್​ 25ರಿಂದ ಕರಾವಳಿ,ಉತ್ತರ ಒಳನಾಡಲ್ಲಿ ಮಳೆ ಬಿರುಸು

Rain
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿರುವ ಪರಿಣಾಮ ರಾಜ್ಯದ ಹಲವೆಡೆ ತುಸು ಬಿರುಸಾಗಿ ಮಳೆಯಾಗುತ್ತಿದೆ.

ಬುಧವಾರವು ಚಾಮರಾಜನಗರದ ಹರದನಹಳ್ಳಿ, ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯದ ಮಳವಳ್ಳಿ, ಮೈಸೂರಿನ ಸುತ್ತೂರು ಹಾಗೂ ತುಮಕೂರಿನ ಕೊನೆಹಳ್ಳಿ ಸೇರಿ ರಾಜ್ಯದ ಹಲವೆಡೆ ಮಳೆ ಸುರಿದಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಜೂ 25ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಚಿತ್ರದುರ್ಗ, ಹಾಸನ, ಮಂಡ್ಯ, ತುಮಕೂರಿನಲ್ಲಿಯೂ ಜೂ 22ರಂದು ಯೆಲ್ಲೋ ಅಲರ್ಟ್ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ 23ರಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Rains
ಸಾಂದರ್ಭಿಕ ಚಿತ್ರ

ಬಿಪರ್‌ಜಾಯ್ ಚಂಡಮಾರುತವು ತೇವಾಂಶ ಭರಿತ ಮೋಡಗಳನ್ನು ಸೆಳೆದುಕೊಂಡ ಪರಿಣಾಮ, ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಅಗಾಗ್ಗೆ ಮಳೆಯಾಗುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನಲ್ಲೂ ಮಾರುತಗಳು ಪ್ರವೇಶಿಸಿದ್ದು, ಜೂ 25ರಿಂದ ಈ ಭಾಗದಲ್ಲಿ ಜೋರಾಗಿ ಮಳೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net