More

    ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ಇಂದಿನಿಂದ ಮುಂದಿನ ವಾರವದವರೆಗೂ ಭಾರೀ ಮಳೆ IMD ಅಲರ್ಟ್​​..!

    Weather update 14-10-2023: ಅಕ್ಟೋಬರ್​​ 15 ರಿಂದ ದೇಶಾದ್ಯಂತ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾರ್ಯದಲ್ಲಿ 106 ಮಿಮೀ ಮಳೆಯಾಗಿದ್ದು, 24 ಗಂಟೆಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎಂದು ಗುರುತಿಸಿಕೊಂಡಿದೆ.


    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣದಲ್ಲೂ ವರುಣ ಅಬ್ಬರಿಸಲಿದ್ದಾನೆ. ಇಂದಿನಿಂದಬ ಅಕ್ಟೋಬರ್​​​​ 17ರವರೆಗೆ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ.


    ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.


    ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಕಂಡುಬರುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತರ ಕನ್ನಡದಲ್ಲಿ ಮಳೆ ಸಾಧ್ಯತೆ ಇದೆ.ಅಮವಾಸ್ಯೆಯ ಶನಿವಾರ ಸಮುದ್ರಸ್ನಾನಕ್ಕೆ ಸಾಕಷ್ಟು ಜನರು ತೆರಳುತ್ತಿದ್ದು, ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆಯೂ ಜಾಸ್ತಿ ಇದೆ. ಇದೇ ವೇಳೆ ಮೋಡ ಕವಿದ ವಾತಾವರಣ ಸಮುದ್ರದ ತೀರದಲ್ಲಿ ಎಂಜಾಯ್ ಮಾಡುವವರಿಗೆ ತೊಡಕಾಗಿಯೂ ಪರಿಣಮಿಸಿದೆ.


    ಮುಂದಿನ 2 ದಿನ ದೇಶದ ಹಲವು ರಾಜ್ಯಗಲ್ಲಿ ಕುಂಭದ್ರೋಣ ಮಳೆಯಾಗಲಿದೆ. ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ.


    ಅಕ್ಟೋಬರ್ 13ರ ರಾತ್ರಿ ವಾಯುಭಾರ ಕುಸಿತದ ಪರಿಣಾಮ ಪಶ್ಚಿಮ ಭಾಗದಿಂದ ಹಿಮಾಲಯದ ಕಡೆಗೆ ಮತ್ತು ಅಕ್ಟೋಬರ್ 14ರಿಂದ ವಾಯವ್ಯ ಬಾರತದ ಕಡೆಗೆ ಮುಂಗಾರು ಮಳೆ ಪಸರಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts