More

  ವಾರಾಂತ್ಯದಿಂದ ರಾಜ್ಯದೆಲ್ಲಡೆ ಭಾರೀ ಮಳೆ

  ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಧಾರಣ ಪ್ರಮಾಣದಲ್ಲಿದ್ದು, ಈ ವಾರಾಂತ್ಯದಿಂದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

  ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗುತ್ತಿದೆ. ಮಲೆನಾಡು ಸೇರಿ ಒಳನಾಡು ಪ್ರದೇಶಗಳಲ್ಲಿ ಸೀಮಿತ ಸ್ಥಳಗಳಲ್ಲಿ ಹಗುರದಿಂದ ಕೂಡಿದ ವರ್ಷಧಾರೆಯಾಗಿದೆ. ಬುಧವಾರ ಹಾಗೂ ಗುರುವಾರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಂತರ ಶುಕ್ರವಾರ ಹಾಗೂ ಶನಿವಾರ ಮತ್ತೆ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಭಾನುವಾರದಿಂದ ಮತ್ತೆ ಚುರುಕು ಪಡೆಯಲಿದೆ. ವಾರಂತ್ಯದ ಬಳಿಕ ಬಹುತೇಕ ಜಿಲ್ಲೆಗಳಲ್ಲಿ ವರ್ಷವೈಭವ ಮರುಕಳಿಸಲಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡುಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ.

  ಪ್ರಸ್ತುತ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗುತ್ತಿದ್ದು, ಶನಿವಾರದ ಬಳಿಕ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  See also  ಸ್ಮಶಾನದಲ್ಲಿ 'ಫಾರ್ಚುನರ್​' ಏರಲಿದ್ದಾರೆ ಜಾರಕಿಹೊಳಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts