More

    ಚುರುಕಾದ ಮುಂಗಾರು: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಳೆ, ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರದಲ್ಲಿ ಆ.28 ರಂದು ವ್ಯಾಪಕ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ, ಈ ಭಾಗಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಗಸ್ಟ್​ 29, 30 ಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ಇದನ್ನೂ ಓದಿ: ಸೈಬರ್​ ಕೆಫೆಯಲ್ಲಿ ಸಿಗುತ್ತಿತ್ತು, ಕರೊನಾ ನೆಗೆಟೀವ್ ವರದಿ!

    ಮಂಡ್ಯದಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 48 ಗಂಟೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

    ಶಿವಮೊಗ್ಗಕ್ಕೆ ಹೊರಟ ಬಿಎಸ್​ವೈ… ಸ್ವಕ್ಷೇತ್ರ ಶಿಕಾರಿಪುರದಲ್ಲಿ ವಾಸ್ತವ್ಯ

    ಚಾಮುಂಡಿ ತಪ್ಪಲಲ್ಲಿ ರೇಪ್​ ಪ್ರಕರಣ​: ಮೈಸೂರು ಪೊಲೀಸರ ಮೇಲೆ ಸಿಎಂ ಗರಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts