ಚುರುಕಾದ ಮುಂಗಾರು: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಳೆ, ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರದಲ್ಲಿ ಆ.28 ರಂದು ವ್ಯಾಪಕ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ, ಈ ಭಾಗಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳುವ ಸಾಧ್ಯತೆ … Continue reading ಚುರುಕಾದ ಮುಂಗಾರು: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ