ಆ.23 ರಿಂದ ರಾಜ್ಯದಲ್ಲಿ ಭಾರೀ ಮಳೆ! ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್

blank

ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಸುರಿಯುತ್ತಿರುವ ಮಳೆ ಇದೇ ಆಗಸ್ಟ್ 23 ರಿಂದ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 23 ಮತ್ತು 24 ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

blank

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮತ್ತೆ ಕರಾಳತೆಯ ಭೀತಿ: ತಾಲಿಬಾನ್​ ಆಳ್ವಿಕೆಯಲ್ಲಿ ಹೆಣ್ಣುಮಕ್ಕಳಿಗೆ ಶಾಲೆ, ಉದ್ಯೋಗ ಅಪರಾಧವಾಗಿತ್ತು!

ಆಗಸ್ಟ್​​ 1 ರಿಂದ 17 ರವರೆಗೆ ರಾಜ್ಯಾದ್ಯಂತ ಒಟ್ಟಾರೆ 139 ಮಿಮೀ ಮಳೆ ಬದಲಾಗಿ 73 ಮಿಮೀ ಮಳೆ ಸುರಿದಿದೆ. ಶೇ.48 ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ಅವಧಿಯಲ್ಲಿ ರಾಮನಗರ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.23, ಉತ್ತರ ಒಳನಾಡಲ್ಲಿ ಶೇ.55, ಮಲೆನಾಡಲ್ಲಿ ಶೇ.49 ಹಾಗೂ ಕರಾವಳಿಯಲ್ಲಿ ಶೇ.48 ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. ಮುಂದಿನ ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಮೂವರು ಸಮಾಜ ಸೇವಕರಿಗೆ ದೇವರಾಜ ಅರಸು ಪ್ರಶಸ್ತಿ

ಅಕ್ರಮ ಸಾಗಾಟದ ವೇಳೆ ವಾಹನ ಪಲ್ಟಿಯಾಗಿ 50 ಕರುಗಳ ದುರ್ಮರಣ

Share This Article
blank

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

blank