ಬೆಂಗಳೂರು: ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಶನಿವಾರವೂ ಧಾರಾಕಾರವಾಗಿ ಮಳೆ ಸುರಿದಿದೆ. 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಕ್ಯಾಸಲ್ ರಾಕ್ 13, ಕೋಟ 9, ಗೇರ್ಸೋಪ್ಪ 9, ಕೊಡಗಿನ ಭಾಗಮಂಡಲ 13, ಉಡುಪಿಯ ಕುಂದಾಪುರ 10, ಸಿದ್ದಾಪುರ 9, ಚಿಕ್ಕಮಗಳೂರಿನ ಕೊಟ್ಟಿಗೆಹಾರ 9, ಕಮ್ಮರಡಿ 8 ಸೆಂಮೀ ಮಳೆ ಬಿದ್ದಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.6ರಿಂದ ಜು.12ರವರೆಗೆ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 2 ದಿನ ಬಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ತಟ್ಟದ ಹತ್ತಿರ ಗಂಟೆಗೆ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ, ಇಲಾಖೆ ಸೂಚಿಸಿದೆ. ಬೆಳಗಾವಿಯಲ್ಲಿ ಜು.6ರಂದು ಯೆಲ್ಲೋ ಅಲರ್ಟ್ ಇರಲಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮುಂದಿನ 4 ದಿನ ಮೋದ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಮೋಡ ಮುಸುಕಿದ ವಾತಾವರಣದೊಂದಿಗೆ ಹಗುರ ಮಳೆಯಾಗಲಿದೆ. ಪ್ರತಿ ಗಂಟೆಗೆ ಗಾಳಿಯ ವೇಗ 40-50 ಕಿ.ಮೀ. ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿ.ಸೆ. ಇರುವ ಸಾಧ್ಯತೆ ಇದೆ.
ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ಸುಮೋಟೋ ಕೇಸ್ ದಾಖಲು| sumoto-case