More

    ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ! ಈ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಿದ ಐಎಂಡಿ

    ಕೇರಳ: ನಿರಂತರ ಮಳೆಯಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಇದೀಗ ಭಾರತೀಯ ಹವಾಮಾನ ಇಲಾಖೆ ಹೊಸ ಪ್ರಕಟಣೆ ಹೊರಡಿಸಿದ್ದು, ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ 200 ಮಿಮೀ.ಗಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ತಿಳಿಸಿದೆ. ಈಗಾಗಲೇ ಬಿರುಸಿನ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವುದರಿಂದ ಕೊಚ್ಚಿ ಮತ್ತು ತ್ರಿಶೂರ್‌ನಂತಹ ನಗರಗಳು ಪ್ರವಾಹದಿಂದ ತತ್ತರಿಸುತ್ತಿವೆ. ಸದ್ಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇನ್ನಷ್ಟು ಮಳೆ ಸುರಿಯಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ.

    ಇದನ್ನೂ ಓದಿ: ನಾನೇ ನಾಯಕ, ನಾನೇ ಖಳನಾಯಕ ; ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್​ವುಡ್​ ಕ್ಷೇತ್ರಪತಿ ನವೀನ್ ಶಂಕರ್​

    ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಶುಕ್ರವಾರದಂದು ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಯೆಲ್ಲೋ ಅಲರ್ಟ್‌ನೊಂದಿಗೆ ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ 11 ಸೆಂ.ಮೀ-20 ಸೆಂ.ಮೀ ವರೆಗಿನ ಅತಿ ಹೆಚ್ಚು ಮಳೆಯ ಸೂಚನೆಯ ಮೇರೆಗೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿತ್ತು.

    ಹವಾಮಾನ ವೈಪರೀತ್ಯದಿಂದ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಕೇರಳ ರಾಜ್ಯದ ಕಂದಾಯ ಸಚಿವ ಕೆ.ರಾಜನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, “ಕಳೆದ ದಿನದಲ್ಲಿ ಕೆಲವು ಪ್ರದೇಶಗಳಲ್ಲಿ ಈಗಾಗಲೇ 20 ಸೆಂ.ಮೀ ಮಳೆಯಾಗಿದೆ. ಕೋಝಿಕ್ಕೋಡ್ ಜಿಲ್ಲೆಯ ಕುನ್ನಮಂಗಲಂ 226.2 ಮಿಮೀ ಮಳೆ ಸುರಿದಿದೆ. ಚೆರ್ತಲಾ, ಕುಮಾರಕೋಮ್ ಮತ್ತು ತಾಮರಸ್ಸೆರಿಯಂತಹ ಇತರ ಪ್ರದೇಶಗಳು ಸಹ ಗಣನೀಯ ಪ್ರಮಾಣದ ಮಳೆಯನ್ನು ವರದಿ ಮಾಡಿದ್ದು, ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).

    ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ ಅಂದ್ರೆ, ನೀನು 500 ರನ್​ ಗಳಿಸಿ ಏನು ಫಲ? ಸಂಜುಗೆ ಬೆವರಿಳಿಸಿದ ಮಾಜಿ ಆಟಗಾರ

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts