

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸುಗೊಂಡಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ. ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಬಿರುಸಿನ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂ.ಗ್ರಾಮಾಂತರ ಮತ್ತು ಚಾಮರಾಜನಗರದಲ್ಲಿ ಅ.10 ಮತ್ತು ಅ.11ರಂದು ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಹಾಗೂ ಕರಾವಳಿಯಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.