Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಮಳೆಯ ಅಬ್ಬರ: ಮಣಿಪುರದಲ್ಲಿ 3,500 ಕುಟುಂಬಗಳು ನಿರಾಶ್ರಿತ

Thursday, 14.06.2018, 4:28 PM       No Comments

ಮಣಿಪುರ: ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆಗಳು ನೀರಿನಲ್ಲಿ ಮುಳುಗಿ 3,500 ಕುಟುಂಬಗಳು ಆಶ್ರಯ ಕಳೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡಿರುವ ಪರಿಣಾಮ 500 ಕುಟುಂಬಗಳನ್ನು ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಆದರೆ, ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ರಾಜ್ಯದಲ್ಲಿ ಮತ್ತೆ ಮಳೆ ಬಂದರೆ ಜನಜೀವನ ಇನ್ನೂ ಅಸ್ತವ್ಯಸ್ತವಾಗಲಿದೆ ಎಂದು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಸಾದರ್​ ತಪನ್​ ಕುಮಾರ್​ ತಿಳಿಸಿದ್ದಾರೆ.

ಇಂಫಾಲ್​ ಕಣಿವೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ರಾಜ್ಯದ ವಿವಿಧೆಡೆ 89 ನಿರಾಶ್ರಿತರ ಕ್ಯಾಂಪ್​ ನಿಯೋಜಿಸಲಾಗಿದೆ. ಮಣಿಪುರದ ಲೈಫ್​ಲೈನ್​ ಅಸ್ಸಾಂ-ಅಗರ್ತಲ ರಾಷ್ಟ್ರೀಯ ಹೆದ್ದಾರಿಯನ್ನು ನಿನ್ನೆ ರಾತ್ರಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಕಚೇರಿ, ಶಾಲಾ ಕಾಲೇಜಿಗೆ ರಜೆ
ಪರಿಸ್ಥಿತಿಯನ್ನು ಮನಗಂಡು ಇಂದು ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜೂ.15ರ ವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮಣಿಪುರದ ಜತೆ ಮೇಘಾಲಯ, ಅಸ್ಸಾಂ, ನಾಗಾಲ್ಯಾಂಡ್​, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top