ನವದಹೆಲಿ: ನೈರುತ್ಯ ಮುಂಗಾರು ಚುರುಕಾಗಿದ್ದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಮುಂಬೈ ಏರ್ಪೋರ್ಟ್ನಲ್ಲಿ ತಪ್ಪಿದ ಭಾರೀ ಅನಾಹುತ : ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಅಲ್ಲದೆ ಉತ್ತರ ಕನ್ನಡ ಜಿಲ್ಲೆಯಲ್ಲಿ 200 ಮಿಲಿಮೀಟರ್‌ಗೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಜೂನ್ 11ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಜತೆಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಅಲೆ ಉಂಟಾಗುವ ಎಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಅಲೆಗಳ ಎತ್ತರವು 1.7 ರಿಂದ 2.5 ಮೀಟರ್‌ಗಳ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹಾಗೂ ಕಾರವಾರದಿಂದ ಕುಂದಾಪುರದವರೆಗೆ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಅಲ್ಲದೆ ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ತೀವ್ರ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಸೂಚಿಸಿದ್ದಾರೆ.
ಮುಂಗಾರು ಮಳೆಯ ಪ್ರಭಾವ ಕೇವಲ ಕರಾವಳಿ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಭಾಗಗಳನ್ನು ಒಳಗೊಂಡಿರುವ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿ ಪ್ರಭಾವ ಉಂಟಾಗುತ್ತದೆ ಎಂದು ಐಎಂಡಿ ಎಚ್ಚರಿಸುತ್ತದೆ. (ಏಜೆನ್ಸೀಸ್)
ಪ್ರಧಾನಿ ಪದಗ್ರಹಣ ಸಮಾರಂಭ: ಇವರೇ ನೋಡಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂಸದರು