More

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವರುಣ ದೇವ ಸ್ವಲ್ಪ ಮಟ್ಟಿಗೆ ಕೃಪೆ ತೋರಿದ್ದಾನೆ. ಸಾಮಾನ್ಯವಾಗಿ ತಾಪಮಾನ ಹೆಚ್ಚಳವಾದಾಗ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ್ಯಂತ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

    ಉಳಿದಂತೆ ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್​ನಗರದಲ್ಲಿ ಮಳೆಯಾಗಿದೆ. ಕಲಬುರಗಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ಉಷ್ನಾಂಶ ದಾಖಲಾಗಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts